ಬಳ್ಳಾರಿ: ಗ್ರಾಮಾಂತರ ವ್ಯಾಪ್ತಿಯ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಶಾಸಕ ನಾಗೇಂದ್ರರವರು ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸಿದರು.
ಕೊರೊನಾ ಸೊಂಕಿನ ಭಯದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದು, ವಿದ್ಯಾರ್ಥಿಗಳ ಪಾಲಕರು ಆತಂಕದಲ್ಲಿರುವುದನ್ನ ಮನಗಂಡು, ಬಳ್ಳಾರಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮೋಕಾ ಹಾಗೂ ಕೌಲ್ ಬಜಾರ್ ನಲ್ಲಿ ಬರುವ ಸೆಂಟ್ ಜಾನ್ಸ್ ನ ಪರೀಕ್ಷಾ ಕೇಂದ್ರಗಳಿಗೆ ಇಂದು ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸಿದರು. ಅಲ್ಲದೇ ಖುದ್ದಾಗಿ ಮುಂದೆ ನಿಂತು ಪರೀಕ್ಷಾ ಕೊಠಡಿಗಳಲ್ಲಿ ಸ್ಯಾನಿಟೈಸ್ ಮಾಡಿಸಿದರು.
ನಂತರ ಅಧಿಕಾರಿಗಳ ಜೊತೆ ಮಾತನಾಡಿ, ಪರೀಕ್ಷಾ ಕೊಠಡಿಗಳಲ್ಲಿ ಕೂರುವ ವಿದ್ಯಾರ್ಥಿಗಳ ನಡುವೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಹಾಗೂ ಪ್ರತಿಯೊಬ್ಬ ಪರೀಕ್ಷಾರ್ಥಿಗೆ ಕಡ್ಡಾಯವಾಗಿ ಮಾಸ್ಕ್ ನೀಡುವಂತೆ ಸೂಚಿಸಿದರು.
ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗಯ್ಯ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸಪ್ಪ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.