ಬಳ್ಳಾರಿ: ರಾಜ್ಯ ಛಾಯಾವೃತ್ತಿ ಸಮೂಹವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ನಿರ್ಲಕ್ಷಿಸುತ್ತಿದೆ. ಈ ಹಿನ್ನೆಲೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಕ್ಟೋಬರ್ 31ರಂದು ಬೆಂಗಳೂರು ಚಲೋ ನಡೆಸಲಿದ್ದೇವೆ ಎಂದು ಜಿಲ್ಲಾ ವೃತ್ತಿ ನಿರತ ಛಾಯಾಗ್ರಾಹಕರ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಬಿ.ಗೋಪಾಲ್ ಹೇಳಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು, ಅಸಂಘಟಿತ ಕಾರ್ಮಿಕ ವಲಯದ ಕಾರ್ಮಿಕರ ವರ್ಗಕ್ಕೆ ಸೇರಿಸಿದರೂ ಸಹ ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಸಮಾಧಾನ ವ್ಯಕ್ತಪಡಿಸಿದರು.
ಕೋವಿಡ್-19 ವಿಶೇಷ ಪ್ಯಾಕೇಜ್ ಸೇರಿದಂತೆ ಕರ್ನಾಟಕ ಛಾಯಾಗ್ರಹಣ ಅಕಾಡೆಮಿ ಸ್ಥಾಪಿಸಿ ಛಾಯಾಗ್ರಾಹಕರ ಸರ್ಕಾರ ಬೆಂಬಲಕ್ಕೆ ನಿಲ್ಲಬೇಕು ಎಂದು ಸರ್ಕಾರವನ್ನು ಒತ್ತಾಯಿಸುವುದಾಗಿ ಹೇಳಿದರು.