ಬಳ್ಳಾರಿ: ಕರ್ನಾಟಕ ಗ್ರಾಮೀಣ ಬ್ಯಾಂಕಿನಲ್ಲಿ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು, ಬ್ಯಾಂಕ್ನ ಮಹತ್ವದ ದಾಖಲೆಗಳು ಸುಟ್ಟು ಕರಕಲಾಗಿವೆ.
ಜಿಲ್ಲೆಯ ಕೊಟ್ಟೂರು ಪಟ್ಟಣದ ಕರ್ನಾಟಕ ಗ್ರಾಮೀಣ ಬ್ಯಾಂಕಿನಲಿ ಶಾಖೆಯಲ್ಲಿ ಎರಡೂ ವಿದ್ಯುತ್ ವಾಹಕ ತಂತಿಗಳು ಒಂದಂಕ್ಕೊಂದು ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಕಂಪ್ಯೂಟರ್ಗಳು ಹಾಗೂ ಪಿಠೋಪಕರಣಗಳು ಸೇರಿ ಇನ್ನಿತರೆ ಮಹತ್ವದ ದಾಖಲೆಗಳು ಸುಟ್ಟು ಹೋಗಿವೆ ಎನ್ನಲಾಗುತ್ತಿದೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯು ಬೆಂಕಿ ನಂದಿಸಿದ್ದು, ಭಾರಿ ಅನಾಹುತ ತಪ್ಪಿದಂತಾಗಿದೆ.