ETV Bharat / state

ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯದಿಂದ ಪ್ರೀತಿ ಗೆಹ್ಲೋಟ್​ ವರ್ಗಾವಣೆಗೆ ತಡೆ - gehlot-karnataka-administrative-court

ಈ ಹಿಂದೆ ಇದ್ದಂತಹ ಪಾಲಿಕೆ ಆಯುಕ್ತೆ ತುಷಾರಮಣಿ ಅವರು ಸಹ ಆರಂಭದಲ್ಲಿ ತುಂಬಾ ಕಟ್ಟುನಿಟ್ಟಾದ ಕಾರಣ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ, ಅವರೂ ಸಹ ಆಡಳಿತಾತ್ಮಕ ನ್ಯಾಯಾಲಯದ ಮೊರೆ ಹೋಗಿ ತಮ್ಮ ವರ್ಗಾವಣೆಗೆ ತಡೆಯಾಜ್ಞೆ ತಂದಿದ್ದರು..

ಪ್ರೀತಿ ಗೆಹ್ಲೋಟ್​
ಪ್ರೀತಿ ಗೆಹ್ಲೋಟ್​
author img

By

Published : Dec 2, 2020, 6:09 PM IST

ಬಳ್ಳಾರಿ : ಇಲ್ಲಿನ ಮಹಾನಗರ ಪಾಲಿಕೆಯ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರನ್ನು ಬಂದ ಹತ್ತು ದಿನದಲ್ಲೇ ವರ್ಗಾವಣೆ ಮಾಡಲಾಗಿತ್ತು. ಆದರೆ, ಅವಧಿ ಪೂರ್ವ ವರ್ಗಾವಣೆ ಮಾಡಿದ್ದರಿಂದ ಅವರು ಕರ್ನಾಟಕ ಆಡಳಿತಾತ್ಮಕ ನ್ಯಾಯಲಯದಿಂದ ತಮ್ಮ ವರ್ಗಾವಣೆಗೆ ತಡೆಯಾಜ್ಷೆ ತಂದು ಮುಂದುವರೆದಿದ್ದಾರೆ.

ಐಎಎಸ್ ಅಧಿಕಾರಿಯಾಗಿರುವ ಗೆಹ್ಲೋ‌ಟ್ ಅವರ ಬಿಗಿ ಆಡಳಿತದಿಂದ ಪಾಲಿಕೆಯಲ್ಲಿ ತಮ್ಮ ಕೈ ಚಳಕ ನಡೆಯದ ವ್ಯಕ್ತಿಗಳು ಇವರ ವರ್ಗಾವಣೆಗೆ ಪ್ರಯತ್ನ ಮಾಡಿರಬಹುದು ಅಥವಾ ಈ ಹುದ್ದೆಗೆ ಬರಲು ಪ್ರಯತ್ನಿಸಿದವರು ಸಾಕಷ್ಟು ಕೈ ಬೆಚ್ಚಗೆ ಮಾಡಿದ ಕಾರಣ ಗೆಹ್ಲೋಟ್​ ಅವರನ್ನು ವರ್ಗಾವಣೆ ಮಾಡಿಸಲು ಮುಂದಾಗಿರಬೇಕು ಎಂಬ ಮಾತ ಕೇಳಿ ಬರುತ್ತಿವೆ.

ಈ ಹಿಂದೆ ಇದ್ದಂತಹ ಪಾಲಿಕೆ ಆಯುಕ್ತೆ ತುಷಾರಮಣಿ ಅವರು ಸಹ ಆರಂಭದಲ್ಲಿ ತುಂಬಾ ಕಟ್ಟುನಿಟ್ಟಾದ ಕಾರಣ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ, ಅವರೂ ಸಹ ಆಡಳಿತಾತ್ಮಕ ನ್ಯಾಯಾಲಯದ ಮೊರೆ ಹೋಗಿ ತಮ್ಮ ವರ್ಗಾವಣೆಗೆ ತಡೆಯಾಜ್ಞೆ ತಂದಿದ್ದರು.

ಆದರೆ, ಅವರು ನಂತರದ ದಿನಗಳಲ್ಲಿ ತಮ್ಮ ಕಾರ್ಯಶೈಲಿಯಲ್ಲಿ ಬದಲಾಗಿ, ಕೆಲ ದುಷ್ಟ ಶಕ್ತಿಗಳ ಜೊತೆ ಕೈಜೋಡಿಸಿ ಭ್ರಷ್ಟಾಚಾರದ ಕೂಪಕ್ಕೆ ಬಿದ್ದರು ಎಂದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು.

ಪ್ರೀತಿ ಗೆಹ್ಲೋಟ್​ ಅವರು ಐಎಎಸ್ ಅಧಿಕಾರಿಯಾಗಿದ್ದು, ಭ್ರಷ್ಟ ಶಕ್ತಿಗಳನ್ನು ಹತ್ತಿರಕ್ಕೆ ಬಿಟ್ಟುಕೊಳ್ಳದೆ ಉತ್ತಮ ಆಡಳಿತ ನೀಡಿ ನಗರದ ನಾಗರಿಕರ ಮನ ಗೆಲ್ಲಬೇಕೆಂಬುದು ಜನರ ಆಶಯವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.