ETV Bharat / state

ಬಳ್ಳಾರಿ ಬಂದ್, ಕಾನೂನು ಉಲ್ಲಂಘನೆಯಾದಲ್ಲಿ ನಿರ್ದಾಕ್ಷಿಣ್ಯ ಕ್ರಮ: ಎಸ್​ಪಿ ಅಡಾವತ್ ಎಚ್ಚರಿಕೆ

ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಯನ್ನು ಶಾಂತ ರೀತಿಯಲ್ಲಿ ಕೈಗೊಳ್ಳುವುದು, ಬಂದ್ ಮಾಡುವಂತೆ ಯಾವುದೇ ವ್ಯಕ್ತಿಯಾಗಲೀ ಯಾವುದೇ ಸಂಘಟನೆಯಾಗಲೀ ಯಾರನ್ನೂ ಒತ್ತಾಯಿಸುವಂತಿಲ್ಲ. ಯಾವುದೇ ರೀತಿಯ ಸಾರ್ವಜನಿಕ ಮತ್ತು ಸರ್ಕಾರದ ಆಸ್ತಿಗಳಿಗೆ ಧಕ್ಕೆಯಾಗದಂತೆ ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕಾನೂನಿನ ಚೌಕಟ್ಟಿನಲ್ಲಿ ಮುಷ್ಕರ ಕೈಗೊಳ್ಳಲು ಸೂಚಿಸಲಾಗಿದೆ..

SP Adawat warns
ಎಸ್​ಪಿ ಅಡಾವತ್ ಎಚ್ಚರಿಕೆ
author img

By

Published : Nov 25, 2020, 10:10 PM IST

ಬಳ್ಳಾರಿ: ಬಳ್ಳಾರಿಯನ್ನು ವಿಭಜಿಸಿ ವಿಜಯನಗರ ನೂತನ ಜಿಲ್ಲೆ ರಚನೆ ಮಾಡಿರೋದನ್ನ ವಿರೋಧಿಸಿ ವಿವಿಧ ಸಂಘಟನೆಗಳ ಮುಖಂಡರು ಬಳ್ಳಾರಿ ಬಂದ್ ಹಮ್ಮಿಕೊಂಡಿರುವ ಹಿನ್ನೆಲೆ, ಜಿಲ್ಲಾ ಪೊಲೀಸ್ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಮುನ್ನಚ್ಚೆರಿಕಾ ಕ್ರಮ ಕೈಗೊಂಡಿದೆ.

ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ, ವಿವಿಧ ಸಂಘಟನೆಗಳು, ರೈತ ಪರ ಸಂಘಟನೆಗಳು, ಕನ್ನಡ ಪರ ಸಂಘಟನಾಕಾರರು, ವಿವಿಧ ರಾಜಕೀಯ ಮುಖಂಡರು ಮತ್ತು ವಿವಿಧ ಸಾಮಾಜಿಕ ಹೋರಾಟ ಸಂಘಟನೆಗಳ ಮುಖಂಡರು ನ.26ರಂದು ಬಳ್ಳಾರಿ ಬಂದ್ ಹಮ್ಮಿಕೊಂಡಿರುವ ಹಿನ್ನೆಲೆ, ಜಿಲ್ಲಾ ಪೊಲೀಸ್ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಮುನ್ನಚ್ಚೆರಿಕಾ ಕ್ರಮಗಳು ಮತ್ತು ಬಂದೋಬಸ್ತ್ ಕೈಗೊಂಡಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಎಸ್ಪಿ ಸೈದುಲು ಅಡಾವತ್ ಅವರು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಲ್ಲಿ ಆಯಕಟ್ಟಿನ ಸ್ಥಳಗಳಲ್ಲಿ 3 ಜನ ಡಿಎಸ್‍ಪಿ, 10 ಸಿಪಿಐ/ಪಿಐ,18 ಪಿಎಸ್‍ಐ, 40 ಎಎಸ್‌ಐ, 200 ಹೆಚ್‌ಸಿ/ಪಿಸಿ, 3 ಡಿಎಆರ್ ತುಕಡಿ ನೇಮಿಸಿಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.

ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಯನ್ನು ಶಾಂತ ರೀತಿಯಲ್ಲಿ ಕೈಗೊಳ್ಳುವುದು, ಬಂದ್ ಮಾಡುವಂತೆ ಯಾವುದೇ ವ್ಯಕ್ತಿಯಾಗಲೀ ಯಾವುದೇ ಸಂಘಟನೆಯಾಗಲಿ ಯಾರನ್ನೂ ಒತ್ತಾಯಿಸುವಂತಿಲ್ಲ.

ಯಾವುದೇ ರೀತಿಯ ಸಾರ್ವಜನಿಕ ಮತ್ತು ಸರ್ಕಾರದ ಆಸ್ತಿಗಳಿಗೆ ಧಕ್ಕೆಯಾಗದಂತೆ ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕಾನೂನಿನ ಚೌಕಟ್ಟಿನಲ್ಲಿ ಮುಷ್ಕರ ಕೈಗೊಳ್ಳಲು ಸೂಚಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಆದ್ದರಿಂದ, ಬಳ್ಳಾರಿ ಜಿಲ್ಲೆಯ ಸಾರ್ವಜನಿಕರು ಆತಂಕಕ್ಕೊಳಗಾಗದೇ ಆಗತ್ಯವಿದ್ದಲ್ಲಿ ತಮ್ಮ ರಕ್ಷಣೆ ಹಾಗೂ ಸಹಾಯಕ್ಕಾಗಿ ಸ್ಥಳೀಯ ಪೊಲೀಸರನ್ನು ಮತ್ತು ಜಿಲ್ಲಾ ಕಂಟ್ರೋಲ್ ರೂಂ ದೂ: 08392-258100 I 256101/ 256103/ 257100/ 257600 & 9480803000 ಸಂಪರ್ಕಿಸಬೇಕು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 4 ರಾಜ್ಯಗಳಲ್ಲಿ ಸಿಬಿಐ ಶೋಧ: ₹1 ಕೋಟಿ ನಗದು ವಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.