ಬಳ್ಳಾರಿ: ಗಣಿನಾಡಿನಲ್ಲಿ ಅಂದಾಜು 350 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, ಇದೀಗ ಗುಣಮುಖರಾದ 56 ಮಂದಿ ಕರ್ತವ್ಯಕ್ಕೆ ಮರಳಿ ಹಾಜರಾಗಿದ್ದಾರೆ.
ಈ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಹೊಸಪೇಟೆ ಹಾಗೂ ಬಳ್ಳಾರಿಯಲ್ಲಿ ಪೊಲೀಸರಿಗಾಗಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ಅನ್ನು ಜಿಲ್ಲಾಡಳಿತದ ವತಿಯಿಂದ ಸ್ಥಾಪಿಸಲಾಗಿದೆ. ಸದ್ಯ ಕೋವಿಡ್ ಕೇರ್ ಸೆಂಟರ್ನಲ್ಲಿ ಕೇವಲ 36 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರೂ ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸಿದರು.
ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಕರ್ತವ್ಯಕ್ಕೆ ಮರಳಿದ 56 ಮಂದಿ ಪ್ಲಾಸ್ಮಾ ದಾನ ಮಾಡಲು ಸಿದ್ಧರಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.
ಜಿಲ್ಲಾ ಪೋಲಿಸ್ ಇಲಾಖೆಯ ಹಲವು ಠಾಣೆಗಳ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಆದರೆ ಸಾರ್ವಜನಿಕರ ಸಮಸ್ಯೆಗಳಿಗೆ ನಾವು ಉತ್ತಮವಾಗಿಯೇ ಸ್ಪಂದಿಸಿದ್ದೇವೆ. ಸಿಬ್ಬಂದಿ ಹಾಗೂ ಠಾಣಾ ಮೇಲಾಧಿಕಾರಿಗಳ ಅನುಪಸ್ಥಿತಿಯಲ್ಲೇ ಆಯಾ ಪೊಲೀಸ್ ಠಾಣೆಗಳ ಪೊಲೀಸರು ಬಹಳ ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.