ETV Bharat / state

ಬಳ್ಳಾರಿ ಪಾಲಿಕೆ ಚುನಾವಣೆ: ಸದಸ್ಯರ ವಿರುದ್ಧ ಕೋವಿಡ್​ ಕೇಸ್​ ದಾಖಲು - ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ,

ಗಣಿಜಿಲ್ಲೆಯಲ್ಲಿ ಮಹಾನಗರ ಪಾಲಿಕೆ ಚುನಾವಣೆ ರಂಗೇರಿದ್ದು, ಕೋವಿಡ್​ ನಿಯಮ ಉಲ್ಲಂಘನೆ ಮಾಡಿ ಪ್ರಚಾರ ನಡೆಸಿದ ಪಾಲಿಕೆ ಸದಸ್ಯರ ಮೇಲೆ ಪ್ರಕರಣ ದಾಖಲಾಗಿದೆ.

Bellary corporation Election Campaign, Covid rules break case, Covid rules break case in bellary, ಕೋವಿಡ್ ನಿಯಮ ಉಲ್ಲಂಘನೆ, ಬಳ್ಳಾರಿಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ, ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ, ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಸುದ್ದಿ,
ಕೋವಿಡ್ ನಿಯಮ ಉಲ್ಲಂಘನೆ ಕೇಸ್ ದಾಖಲು
author img

By

Published : Apr 21, 2021, 10:24 AM IST

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣಾ ಪ್ರಚಾರದ ವೇಳೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದಡಿ ಅಭ್ಯರ್ಥಿಗಳ ವಿರುದ್ಧ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಳ್ಳಾರಿ ಮಹಾನಗರದ 20ನೇ ವಾರ್ಡಿನ ಹುಸೇನ್ ನಗರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಕಿಟ್ಟಿ (ಕೃಷ್ಣ) ಮತ್ತು ಕಾಂಗ್ರೆಸ್ ಅಭ್ಯರ್ಥಿ ವಿ.ವಿವೇಕ ಪ್ರಚಾರದ ವೇಳೆ ಕೋವಿಡ್ ನಿಯಮ ಪಾಲಿಸಿಲ್ಲ. ಹೀಗಾಗಿ ಅವರ ವಿರುದ್ಧ ಆರ್​ಒ ನಾಗರಾಜ ಕೇಸು ದಾಖಲಿಸಿದ್ದಾರೆ.

ಘಟನೆಯ ವಿವರ

ನಿನ್ನೆ ಬೆಳಿಗ್ಗೆ 11.30ರ ಸುಮಾರಿಗೆ ಉಭಯ ಪಕ್ಷದ ಅಭ್ಯರ್ಥಿಗಳು ತಮ್ಮ ವಾರ್ಡ್​ ವ್ಯಾಪ್ತಿಯಲ್ಲಿ ಪ್ರಚಾರ ಕೈಗೊಂಡಿದ್ದರು. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ನಿಗದಿಪಡಿಸಿದ ಬೆಂಬಲಿಗರಿಗಿಂತಲೂ ಹೆಚ್ಚು ಮಂದಿಯನ್ನು ಸೇರಿಸಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಜೊತೆ ಕೋವಿಡ್ ನಿಯಮವನ್ನೂ ಪಾಲಿಸಿಲ್ಲ ಎಂದು ದೂರಿನಲ್ಲಿ ಆರ್​ಒ ನಾಗರಾಜ ಉಲ್ಲೇಖಿಸಿದ್ದಾರೆ.

ಅಭ್ಯರ್ಥಿಗಳ ವಿರುದ್ಧ ಕೋವಿಡ್​ ಉಲ್ಲಂಘನೆ ಪ್ರಕರಣ ದಾಖಲಾಗಿರುವುದರ ಬಗ್ಗೆ ಗಾಂಧಿ ನಗರ ಠಾಣೆಯ ಸಿಪಿಐ ನಿರಂಜನ ಈಟಿವಿ ಭಾರತಗೆ ಸ್ಪಷ್ಟಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.