ಬಳ್ಳಾರಿ : ಜಿಲ್ಲೆಯಲ್ಲಿ ಇಂದು ಹೊಸದಾಗಿ 380 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 10,263 ಆಗಿದೆ.
ಇದುವರೆಗೆ 5,661 ಮಂದಿ ಗುಣಮುಖರಾಗಿದ್ದು, 114 ಮಂದಿ ಮೃತಪಟ್ಟಿದ್ದಾರೆ. ಸದ್ಯ 4,488 ಸಕ್ರಿಯ ಪ್ರಕರಣಗಳಿವೆ.
ಇಂದು 148 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಆರು ಮಂದಿ ಬಲಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಾಹಿತಿ ನೀಡಿದ್ದಾರೆ.