ಬಳ್ಳಾರಿ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಹೋಬಳಿಯಲ್ಲಿ ರೈತರು ಬೆಳೆದ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.

ಗುಡೇಕೋಟೆ ಗ್ರಾಮದ ಪ್ರಹ್ಲಾದ ತಳವಾರ ಎಂಬ ರೈತನ ಹೊಲ ಸಂಪೂರ್ಣ ಜಲಾವೃತವಾಗಿದೆ. ಅಲ್ಲದೇ ಈರುಳ್ಳಿ ಬೆಳೆ ಕೂಡ ನಾಶವಾಗಿದೆ.

ತಾಲೂಕಿನಲ್ಲಿ ಹಿಂದೆಂದೂ ಕಾಣದ ಮಳೆ ಈ ವರ್ಷ ಬಂದಿದ್ದು, ರೈತರನ್ನು ಸಂಕಷ್ಟಕ್ಕೆ ದೂಡಿದೆ.