ಬಳ್ಳಾರಿ: ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವೈದ್ಯಕೀಯ ತುರ್ತು ಸಮಸ್ಯೆಗಳ ಕುರಿತಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಇಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಅತೀ ತುರ್ತಾಗಿ ಬೇರೆ ಕಡೆಗಳಲ್ಲಿ ಚಿಕಿತ್ಸೆಗೆ ಹಾಜರಾಗಲು ಕೋರಿ ಬಂದಿರುವ ಅರ್ಜಿಗಳನ್ನು ಸರಿಯಾಗಿ ಪರಿಶೀಲಿಸಿ, ಅವಶ್ಯವಿದೆಯೋ ಇಲ್ಲವೋ ಎಂಬುದನ್ನು ತಿಳಿದು, ಅವರಿಗೆ ಅನುಮತಿ ಪತ್ರ ನೀಡಲಾಗುತ್ತದೆ. ಅರ್ಜಿಗಳನ್ನು ಪರಿಶೀಲಿಸಿ ಅತ್ಯಂತ ಅವಶ್ಯಕತೆ ಹಾಗೂ ತುರ್ತು ವೈದ್ಯಕೀಯ ವ್ಯವಸ್ಥೆ ನೀಡಲು ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ ಎಂದರು. ಶುಭ ಹಾಗೂ ಮರಣ ಹೊಂದಿದವರ ತಿಥಿ ಹಾಗೂ ಇತರೆ ಕಾರ್ಯಗಳಿಗೆ ಮನವಿ ಪತ್ರಗಳನ್ನು ಸಹ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗಳು ಅಂತಹ ಅರ್ಜಿಗಳನ್ನು ಸ್ವೀಕರಿಸಿ ಅವರಿಗೆ ಮನವೋಲಿಸಿ ಪ್ರಸ್ತುತ ಪರಿಸ್ಥಿತಿಯನ್ನು ತಿಳಿಸಿ, ಕೊರೊನಾ ಬಗ್ಗೆ ಅರಿವು ಮೂಡಿಸಿದರು.
ಸಾರ್ವಜನಿಕರ ಅಹವಾಲು ಆಲಿಸಿದ ಬಳ್ಳಾರಿ ಜಿಲ್ಲಾಧಿಕಾರಿ - Bellary DC S.S. Nakul Latest News
ವೈದ್ಯಕೀಯ ತುರ್ತು ಸಮಸ್ಯೆಗಳ ಕುರಿತಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅರ್ಜಿಗಳನ್ನು ಪರಿಶೀಲಿಸಿ ಅತ್ಯಂತ ಅವಶ್ಯಕತೆ ಹಾಗೂ ತುರ್ತು ವೈದ್ಯಕೀಯ ವ್ಯವಸ್ಥೆ ನೀಡಲು ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ ಎಂದರು.