ETV Bharat / state

ಅಪಾಯದಲ್ಲಿರುವ ಗ್ರಾಮಗಳಿಗೆ ತಹಶೀಲ್ದಾರ್ ನೇತೃತ್ವದ ತಂಡ ಭೇಟಿ ನೀಡಿ: ಡಿಸಿ ನಕುಲ್

ಅಪಾಯದಲ್ಲಿರುವ ಗ್ರಾಮಗಳಿಗೆ ತಹಶೀಲ್ದಾರ್, ಪಿಎಸ್​ಐ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ವರದಿ ನೀಡಬೇಕು ಎಂದು ಡಿಸಿ ಸೂಚನೆ ನೀಡಿದರು.

DC meeting
DC meeting
author img

By

Published : Aug 8, 2020, 10:03 AM IST

ಬಳ್ಳಾರಿ: ತುಂಗಾ ಜಲಾಶಯದ ಹೊರ ಹರಿವು 70 ಸಾವಿರ ಕ್ಯೂಸೆಕ್ ಇದ್ದು, ಹೆಚ್ಚು ಮಳೆಯಾಗುತ್ತಿರುವುವರಿಂದ ಜಲಾಶಯದಿಂದ ನೀರು ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜನ, ಜಾನುವಾರುಗಳಿಗೆ ಹಾನಿಯಾಗದಂತೆ ಅಪಾಯದಲ್ಲಿರುವ ಗ್ರಾಮಗಳಿಗೆ ತಹಶೀಲ್ದಾರ್ ನೇತೃತ್ವದ ತಂಡಗಳು ಭೇಟಿ ನೀಡಿ ವಿಸ್ತೃತ ವರದಿ ನೀಡಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಖಡಕ್ ಸೂಚನೆ ನೀಡಿದರು.

ಜಿಲ್ಲೆಯ ಎಲ್ಲ ತಹಶೀಲ್ದಾರ್ ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಜಿಲ್ಲೆಯ ಹರಪನಹಳ್ಳಿ, ಹಡಗಲಿ, ಸಿರುಗುಪ್ಪ, ಹೊಸಪೇಟೆ ಮತ್ತು ಕಂಪ್ಲಿ ತಾಲೂಕಿನ ನದಿ ಪಾತ್ರದ ಗ್ರಾಮಗಳಿಗೆ ನೀರಿನಿಂದ ಹಾನಿಯಾಗಲಿದೆ. ತೀವ್ರ ಮತ್ತು ಮದ್ಯಮ ಅಪಾಯದಲ್ಲಿರುವ ಗ್ರಾಮಗಳಿಗೆ ತಹಶೀಲ್ದಾರ್, ಪಿಎಸ್ಐ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ವರದಿ ನೀಡಬೇಕು ಎಂದು ಸೂಚನೆ ನೀಡಿದರು.

32 ಕಾಳಜಿ ಕೇಂದ್ರಗಳ ಗುರುತು:
ಜಿಲ್ಲೆಯಲ್ಲಿ ಕಾಳಜಿ ಕೇಂದ್ರಗಳನ್ನು ಎರಡು ಭಾಗಗಳಾಗಿ ಮಾಡಲಾಗಿದ್ದು, 32 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ಸದರಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳನ್ನು ಎಸ್​​ಡಿಆರ್​ಎಫ್ ಅಡಿ ಒದಗಿಸಲಾಗುವುದು. ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವುದರಿಂದ ಕಾಳಜಿ ಕೇಂದ್ರದಲ್ಲಿ ಕೊರೊನಾ ಲಕ್ಷಣಗಳಿರುವವರನ್ನು ಪ್ರತ್ಯೇಕವಾಗಿ ಇರಿಸಲು ವ್ಯವಸ್ಥೆ ಮಾಡಿಕೊಳ್ಳುವಂತೆ ಡಿಸಿ ನಕುಲ್ ಸೂಚನೆ ನೀಡಿದರು.

ನದಿ ಪಾತ್ರದ ಗ್ರಾಮಗಳಿಗೆ ನೀರಿನಿಂದ ಹಾನಿಯಾಗುವ ಸಾಧ್ಯತೆ ಇರುವುದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಿಂದ ಡಂಗೂರ, ಟಂಟಂ ಹೊಡೆಸಿ. ಅತೀ ಸೂಕ್ಷ್ಮ ವಲಯಗಳಲ್ಲಿರುವ ಜನರು, ಜಾನುವಾರುಗಳನ್ನು ಆದಷ್ಟು ಬೇಗ ಮುಂಚಿತವಾಗಿಯೇ ಹತ್ತಿರದ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲು ಕ್ರಮಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ತುಂಗಾದಿಂದ ಈಗಾಗಲೇ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ. ಅದೇ ರೀತಿ ಭದ್ರಾದಿಂದಲೂ ನೀರು ಬಿಡುವ ಸಾಧ್ಯತೆ ಇದೆ. ಈ ಎರಡು ನದಿಗಳ ಪಾತ್ರದಲ್ಲಿರುವ 32 ಗ್ರಾಮಗಳ ಜನರಿಗೆ ಅಪಾಯವಾಗುವ ಸಾಧ್ಯತೆ ದಟ್ಟವಾಗಿದೆ.

ಹಡಗಲಿ ತಾಲೂಕಿನ 16 ಗ್ರಾಮಗಳಾದ ನವಲಿ ಗ್ರಾ.ಪಂ. ವ್ಯಾಪ್ತಿಯ ಅಲ್ಲಿಪುರ, ರಾಜವಾಳ, ನವಲಿ, ಹೊನ್ನೂರು, ಕೊಂಬಳಿ ಗ್ರಾ.ಪಂ.ನ ಪುರ ಮತ್ತು ಮಾದಲಗಟ್ಟಿ, ಮಾಗಳ ಗ್ರಾ.ಪಂ.ನ ಮಾಗಳ, ಬಿರಬ್ಬಿ ಗ್ರಾ.ಪಂ ವ್ಯಾಪ್ತಿಯ ಅಂಗೂರು, ಮಕರಬ್ಬಿ ಗ್ರಾ.ಪಂ ವ್ಯಾಪ್ತಿಯ ಹೊಸಳ್ಳಿ, ಬ್ಯಾಲಹುಣಸಿ, ಹಿರೇಬನ್ನಿಮಟ್ಟಿ, ಮಕರಬ್ಬಿ, ಕುರವತ್ತಿ ಗ್ರಾ.ಪಂನ ಕುರವತ್ತಿ, ಲಿಂಗನಾಯನಕನಹಳ್ಳಿ, ಹರವಿ, ಹರವಿಬಸಾಪುರ. ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿ, ಹೊಸೂರು ಮುಂತಾದ ಗ್ರಾಮಗಳಿಗೆ ಅಪಾಯ ಹೆಚ್ಚಿದೆ. ಇನ್ನು ಜಾನುವಾರುಗಳ ಶಿಬಿರಕ್ಕೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಜಾನುವಾರುಗಳಿಗೆ ಬೇಕಾಗುವ ಮೇವು ಕೂಡ ಆಯಾ ಸ್ಥಳಗಳಲ್ಲಿ ಸ್ಟಾಕ್ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.