ETV Bharat / state

ಬಳ್ಳಾರಿ ಗ್ರಾ.ಪಂ. ಚುನಾವಣೆ: ಸಿಬ್ಬಂದಿಗಳಿಗೆ ರಜೆ ನೀಡದಂತೆ ಡಿಸಿ ಸೂಚನೆ

ಬಳ್ಳಾರಿ ಜಿಲ್ಲೆಯಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಯುವ ಕಾರಣ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡದಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಿಗೆ ನಕುಲ್ ಸೂಚನೆ ನೀಡಿದ್ದಾರೆ.

ಎಸ್.ಎಸ್.ನಕುಲ್
ಎಸ್.ಎಸ್.ನಕುಲ್
author img

By

Published : Dec 3, 2020, 9:29 PM IST

ಬಳ್ಳಾರಿ: ರಾಜ್ಯ ಚುನಾವಣಾ ಆಯೋಗವು ಬಳ್ಳಾರಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ - 2020ರ ವೇಳಾಪಟ್ಟಿ ಹೊರಡಿಸಿದ್ದು, ಅದರಂತೆ ಬಳ್ಳಾರಿ ಜಿಲ್ಲೆಯ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಮೊದಲನೇ ಹಂತದಲ್ಲಿ ಬಳ್ಳಾರಿ, ಕುರುಗೋಡು, ಸಿರುಗುಪ್ಪ, ಹೊಸಪೇಟೆ ಮತ್ತು ಕಂಪ್ಲಿ ಹಾಗೂ ಎರಡನೇ ಹಂತದಲ್ಲಿ ಸಂಡೂರು, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ ಮತ್ತು ಹರಪನಹಳ್ಳಿ ತಾಲೂಕುಗಳಿಗೆ ಚುನಾವಣೆ ಜರುಗಲಿದೆ. ಅದರಂತೆ ಬಳ್ಳಾರಿ ಜಿಲ್ಲೆಯ ಮೊದಲನೇ ಹಂತದ ಚುನಾವಣೆಯು ಡಿ.22ರಂದು ಮತ್ತು ಎರಡನೇ ಹಂತದ ಚುನಾವಣೆ ಡಿ.27ರಂದು ನಡೆಯಲಿದೆ. ಮತ ಎಣಿಕೆಯು ಡಿ.30ರಂದು ನಡೆಯಲಿದೆ ಎಂದರು.

ಮಾದರಿ ನೀತಿ ಸಂಹಿತೆಯು ಈಗಾಗಲೇ ಜಾರಿಗೆ ಬಂದಿದ್ದು, ಡಿಸೆಂಬರ್ 31ರವರೆಗೆ ಜಾರಿಯಲ್ಲಿರಲಿದ್ದು, ಚುನಾವಣೆ ನಡೆಯುವ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿ ಪ್ರದೇಶದಲ್ಲಿ ಜಾರಿಯಲ್ಲಿರಲಿದೆ. ಸರ್ಕಾರಿ ನೌಕರರಾಗಿ ಕೆಲಸ ಮಾಡುವ ಅಧಿಕಾರಿಗಳು, ಸಿಬ್ಬಂದಿಗಳಿಗೆ ವರ್ಷಕ್ಕೆ 15 CL ( ಆಕಸ್ಮಿಕ ರಜೆ ) ಇರುತ್ತವೆ ಅದನ್ನು ಡಿಸೆಂಬರ್ ಒಳಗೆ ಮುಗಿಸಬೇಕು. ಆದರೆ, ಈಗ 2020ನೇ ಸಾಲಿನ ಡಿಸೆಂಬರ್​ನಲ್ಲಿ ತೆಗೆದುಕೊಳ್ಳಬೇಕು ಎನ್ನುವವರಿಗೆ ಇದೀಗ ಗ್ರಾಮ ಪಂಚಾಯಿತಿ ಚುನಾವಣಾ ಅಡ್ಡಿಯಾಗಿದೆ. ಅದರಲ್ಲಿ ಜಿಲ್ಲಾಧಿಕಾರಿ ಈಗಾಗಲೇ ಚುನಾವಣೆ ಪ್ರಕ್ರಿಯೆ ಪ್ರಾರಂಭಗೊಂಡಿರುವುದರಿಂದ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ರಜೆ ಮಂಜೂರು ಮಾಡದಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಸೂಚಿಸಿದ್ದಾರೆ.

ಕೊನೆಯ ತಿಂಗಳು ಡಿಸೆಂಬರ್​ನಲ್ಲಿ ಉಳಿದ ರಜೆಗಳನ್ನು ಪಡೆಯಬಹುದು ಎನ್ನುವವರಿಗೆ ರಜೆ ನೀಡುವುದಿಲ್ಲ ಎನ್ನುವ ಮಾಹಿತಿ ಇದೆ. ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಎಂದು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ ಸೂಚಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.