ಬಳ್ಳಾರಿ: ಜಿಲ್ಲೆಯ ಅರಣ್ಯ ವೃತ್ತ ಕಚೇರಿಯ ಸಿಬ್ಬಂದಿಗೆ ಕೋವಿಡ್ ಬಾರದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ, ರೋಗ ನಿರೋಧಕ ಶಕ್ತಿ ವೃದ್ಧಿಸುವ ಮಾತ್ರೆಗಳನ್ನು ಆಯುಷ್ ಇಲಾಖೆ ವತಿಯಿಂದ ವಿತರಿಸಲಾಯಿತು.
ತಾರಾನಾಥ ಆಯುರ್ವೇದ ಕಾಲೇಜಿನ ವೈದ್ಯರು ಹಾಗೂ ಸಂಜೀವಿನಿ ಸೇವಾ ಟ್ರಸ್ಟ್ನ ಅಧ್ಯಕ್ಷರಾದ ಡಾ. ಪ್ರತಿಭಾ ಹಾಗೂ ಕಾರ್ಯದರ್ಶಿ ಶ್ರೀನಿವಾಸ್, ಅರಣ್ಯ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕರಾದ ಸಿ. ನಾಗರಾಜ ಅವರು ಅರಣ್ಯ ಇಲಾಖೆ ಸಿಬ್ಬಂದಿಗೆ ವಿತರಿಸಿದರು.
ಸೇವಾ ಟ್ರಸ್ಟ್ನ ಅಧ್ಯಕ್ಷ ಡಾ.ಎ. ಎಸ್. ಪಾಟೀಲ್ ಅವರು ರೋಗನಿರೋಧಕ ಶಕ್ತಿ ವೃದ್ಧಿಸುವ ಔಷಧಿಗಳ ಪ್ರಾಮುಖ್ಯತೆ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಡಿ. ರಾಜಪ್ಪ,ಆಯುಷ್ ಇಲಾಖೆ ಸಿಬ್ಬಂದಿ ಇದ್ದರು.