ETV Bharat / state

ಬಳ್ಳಾರಿ: ಐಎಎಸ್, ಕೆಎಎಸ್, ಬ್ಯಾಂಕಿಂಗ್ ಪರೀಕ್ಷಾ ತರಬೇತಿಗೆ ಅಣಕು ಪರೀಕ್ಷೆ - Bellary mock test news

ಬಳ್ಳಾರಿಯ ಸರಳಾದೇವಿ‌ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹೊಸಪೇಟೆ, ಸಂಡೂರು, ಹಡಗಲಿ, ಹಗರಿ ಬೊಮ್ಮನಹಳ್ಳಿ, ಸಿರಗುಪ್ಪ, ಕೂಡ್ಲಿಗಿ, ಹರಪನಹಳ್ಳಿ ತಾಲೂಕು ಕೇಂದ್ರಗಳಲ್ಲಿ ಐಎಎಸ್, ಕೆಎಎಸ್, ಬ್ಯಾಂಕಿಂಗ್ ತರಬೇತಿ ಒದಗಿಸಲು ಅಣಕು ಪರೀಕ್ಷೆ ನಡೆಸಲಾಗಿದೆ.

ಬಳ್ಳಾರಿಯಲ್ಲಿ ಅಣಕು ಪರೀಕ್ಷೆ
ಬಳ್ಳಾರಿಯಲ್ಲಿ ಅಣಕು ಪರೀಕ್ಷೆ
author img

By

Published : Jan 3, 2021, 4:20 PM IST

ಬಳ್ಳಾರಿ: ಜಿಲ್ಲಾ ಖನಿಜ ನಿಧಿಯ ಅನುದಾನದಡಿ ಬಳ್ಳಾರಿ ಜಿಲ್ಲಾಡಳಿತವು ಈ ಭಾಗದ ವಿದ್ಯಾರ್ಥಿಗಳಿಗೆ ಐಎಎಸ್, ಕೆಎಎಸ್, ಬ್ಯಾಂಕಿಂಗ್ ತರಬೇತಿ ಒದಗಿಸಲು ಅಣಕು ಪರೀಕ್ಷೆ ನಡೆಸಿದೆ. ಈ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ತರಬೇತಿ ಕೊಡಿಸಲು ಸಿದ್ಧತೆ ಮಾಡಲಾಗಿದೆ.

ಬಳ್ಳಾರಿಯ ಸರಳಾದೇವಿ‌ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹೊಸಪೇಟೆ, ಸಂಡೂರು, ಹಡಗಲಿ, ಹಗರಿ ಬೊಮ್ಮನಹಳ್ಳಿ, ಸಿರಗುಪ್ಪ, ಕೂಡ್ಲಿಗಿ, ಹರಪನಹಳ್ಳಿ ತಾಲೂಕು ಕೇಂದ್ರಗಳಲ್ಲಿ ಇಂದು ಪರೀಕ್ಷೆ ನಡೆಯಿತು.

ಈ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದ ಪದವಿ ಮುಗಿಸಿದ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ಪರೀಕ್ಷೆ ಬರೆದಿದ್ದಾರೆ. ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಪ್ರೊಬೆಷನರಿ ಐಎಎಸ್‌ ಅಧಿಕಾರಿ‌ ರಾಹುಲ್ ಸಂಕನೂರು ಸೇರಿದಂತೆ ಇನ್ನಿತರರು ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ಅಣಕು ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ 150 ವಿದ್ಯಾರ್ಥಿಗಳನ್ನು ಪರಿಗಣಿಸಿ ಅವರಿಗೆ ಜ.10ರಂದು ಕೌನ್ಸೆಲಿಂಗ್ ನಡೆಸಲಾಗುತ್ತದೆ. ಅದರಲ್ಲಿ ಅರ್ಹರಾದವರನ್ನು ತರಬೇತಿಗೆ ಕಳುಹಿಸಿ ಕೊಡಲಾಗುತ್ತದೆ. ರಾಜ್ಯದ ಪ್ರಸಿದ್ಧ ಐಎಎಸ್ ತರಬೇತಿ ಸಂಸ್ಥೆಗಳಲ್ಲೊಂದಾದ ಇನ್‍ಸೈಟ್ಸ್​‍ನ ಸಂಪನ್ಮೂಲ ವ್ಯಕ್ತಿಗಳ ತಂಡ ಜನವರಿ ಮೂರನೇ ವಾರದಿಂದ ತರಬೇತಿ ಆರಂಭಿಸಲಿದೆ. ಒಂದು ವಾರದಲ್ಲಿ 5 ದಿನ, ಪ್ರತಿನಿತ್ಯ 6 ಗಂಟೆಗಳ ಕಾಲ ತರಬೇತಿ ನೀಡಲಾಗುತ್ತದೆ ಎಂದು ಪ್ರೊಬೆಷನರಿ‌‌ ಐಎಎಸ್‌ ಅಧಿಕಾರಿ ರಾಹುಲ್‌ ಸಂಕನೂರು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.