ಬಳ್ಳಾರಿ: ಕಳೆದ ಮುಂಗಾರು ಹಂಗಾಮಿನಲ್ಲಿ ಗಣಿನಾಡು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಸಣ್ಣ, ಅತೀ ಸಣ್ಣ ರೈತರು ಅಂದಾಜು 5,300 ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯಗಳ ಬೆಳೆಗೆ ಉತ್ಸುಕರಾಗಿದ್ದಾರೆ. ಈ ಉಭಯ ಜಿಲ್ಲೆಗಳಲ್ಲಿ ಸರಿಸುಮಾರು 5,012 ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯಗಳಲ್ಲೊಂದಾದ ನವಣೆ ಬೆಳೆಯಲು ರೈತರು ಆಸಕ್ತಿ ತೋರಿದ್ದಾರೆ.
ಅಂದರೆ, ಕೇವಲ 288 ಹೆಕ್ಟೇರ್ ಪ್ರದೇಶದಲ್ಲಿ ಅರ್ಕಾ, ಉದ್ದು ಹಾಗೂ ಬರಗು ಬೆಳೆಯಲು ರೈತರು ಆಸಕ್ತಿ ತೋರಿದ್ದಾರೆ. ಕಳೆದ ಬಾರಿ ಸಿರಿಧಾನ್ಯ ಬೆಳೆದಿರುವ ಸಣ್ಣ ಮತ್ತು ಅತೀ ಸಣ್ಣ ರೈತರ ಬ್ಯಾಂಕ್ ಖಾತೆಗೆ ಈವರೆಗೆ ಅಂದಾಜು 1 ಕೋಟಿಗೂ ಹೆಚ್ಚು ಪ್ರೋತ್ಸಾಹಧನ ಸಂದಾಯವಾಗಿದೆ. ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಸುಮಾರು 6,049 ಹೆಕ್ಟೇರ್ ಪ್ರದೇಶದಲ್ಲಿ ಈ ಸಿರಿಧಾನ್ಯಗಳ ಬೆಳೆಯುವ ಗುರಿ ಹೊಂದಲಾಗಿದೆ.
ಅಂದಾಜು 6 ಕೋಟಿ 4 ಲಕ್ಷ ರೂಪಾಯಿ ಪ್ರೋತ್ಸಾಹ ಧನವನ್ನು ನಿಗದಿಪಡಿಸಿದ್ದು, ಈಗಾಗಲೇ ಸಿರಿಧಾನ್ಯಗಳನ್ನು ಬೆಳೆಯುವ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶರಣಪ್ಪ ಮುದುಗಲ್ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.
ಪ್ರತಿ ಹೆಕ್ಟೇರ್ಗೆ ಅಂದಾಜು 10,000 ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಹೆಕ್ಟೇರ್ಗೆ 2.5 ಎಕರೆಯಂತೆ 2 ಹೆಕ್ಟೇರ್ಗೆ ಪ್ರೋತ್ಸಾಹಧನ ನೀಡಲಾಗುವುದು. ಆಸಕ್ತ ರೈತರು ಸಿರಿಧಾನ್ಯ ಬೆಳೆಯಲು ಈ ಮೂಲಕ ಕೋರಲಾಗಿದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ: ಮಣ್ಣೆತ್ತಿನ ಅಮಾವಾಸ್ಯೆ: ಗಡಿನಾಡಿನಲ್ಲಿ ಜೋಡೆತ್ತುಗಳಿಗೆ ವಿಶೇಷ ಪೂಜೆ