ETV Bharat / state

ಬಳ್ಳಾರಿ: ಕೋವಿಡ್ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯಿಂದ‌ ಮನೆ ಮನೆ ಸಮೀಕ್ಷೆ

author img

By

Published : Apr 27, 2021, 9:59 AM IST

ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳ ತಂಡ ಬಳ್ಳಾರಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮನೆ ಮನೆ ಸಮೀಕ್ಷೆ ಆರಂಭಿಸಿದೆ. ಸಮೀಕ್ಷೆ ಸಂದರ್ಭದಲ್ಲಿ ವಿವಿಧ ರೋಗಗಳಿಂದ ಬಳಲುತ್ತಿರುವವರನ್ನು ಪರೀಕ್ಷೆಗೊಳಪಡಿಸಿ, ಅಗತ್ಯ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುತ್ತಿದೆ.

Bellary
ಕೋವಿಡ್ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯಿಂದ‌ ಮನೆ-ಮನೆ ಸಮೀಕ್ಷೆ

ಬಳ್ಳಾರಿ: ನಗರ ಸೇರಿದಂತೆ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ವಿವಿಧ ಕಾಯಿಲೆಯಿಂದ ಬಳಲುತ್ತಿರುವ ಹಾಗೂ ಆಕ್ಸಿಜನ್ ಪ್ರಮಾಣ 94ಕ್ಕಿಂತ ಕಡಿಮೆ ಇರುವವರನ್ನು ಗುರುತಿಸಿ ತಪಾಸಣೆ ನಡೆಸಲಾಗುತ್ತಿದೆ.

ಕೋವಿಡ್ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯಿಂದ‌ ಮನೆ ಮನೆ ಸಮೀಕ್ಷೆ

ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳ ತಂಡ ಬಳ್ಳಾರಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮನೆ ಮನೆ ಸಮೀಕ್ಷೆ ಆರಂಭಿಸಿದೆ. ಸಮೀಕ್ಷೆ ಸಂದರ್ಭದಲ್ಲಿ ವಿವಿಧ ರೋಗಗಳಿಂದ ಬಳಲುತ್ತಿರುವವರನ್ನು, 60 ವರ್ಷ ಮೇಲ್ಪಟ್ಟವರನ್ನು ಪರೀಕ್ಷೆಗೊಳಪಡಿಸಿ, ಅಗತ್ಯ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುತ್ತಿದೆ. ಇದರ ಜೊತೆಗೆ ಜನರಿಗೆ ಕೋವಿಡ್​ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿವರಿಸಲಾಗುತ್ತಿದೆ ಎಂದು ಬಳ್ಳಾರಿಯ ದೇವಿನಗರದಲ್ಲಿ ಸಮೀಕ್ಷೆ ಕಾರ್ಯ ಕೈಗೊಂಡಿದ್ದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್ ತಿಳಿಸಿದರು.

ಇದೇ ವೇಳೆ ಕೊರೊನಾ ಸೋಂಕಿಗೆ ಒಳಗಾಗಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಒಂದೇ ಮನೆಯ 4 ಸದಸ್ಯರನ್ನು ಭೇಟಿ ಮಾಡಿ, ಅವರಿಗೆ ಸೂಕ್ತ ಸಲಹೆಗಳನ್ನು ನೀಡಲಾಯಿತು.

ಯಾವುದೇ ರೀತಿಯ ಆರೋಗ್ಯ ತೊಂದರೆಗಳು ಕಂಡುಬಂದರೆ ತಕ್ಷಣ ಜಿಲ್ಲಾ ಆರೋಗ್ಯ ಸಹಾಯವಾಣಿ 08392-277100ಕ್ಕೆ ಕರೆ ಮಾಡಿ ತಿಳಿಸುವಂತೆ ಸೂಚಿಸಲಾಗಿದೆ.

ಓದಿ: ಬಳ್ಳಾರಿ ಪಾಲಿಕೆ ಚುನಾವಣೆ: ಕಾಂಗ್ರೆಸ್​ ಮುಖಂಡರಿಂದ ಮತದಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.