ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ಸೀತಾರಾಮ ತಾಂಡಾದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ತಾಂಡಾದ ಸರ್ಕಾರಿ ಶಾಲೆ ಆವರಣದಲ್ಲಿ ಮುಖ್ಯ ಶಿಕ್ಷಕರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಿಹಿ ಹಂಚಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಗಮನ ಸೆಳೆದ ಲಂಬಾಣಿ ನೃತ್ಯ:
ಕಾರ್ಯಕ್ರಮದಲ್ಲಿ ದೇಶ ಭಕ್ತಿಗೀತೆಗಳ ಧ್ವನಿ ಸುರುಳಿಗೆ ಲಂಬಾಣಿ ಸಮುದಾಯದ ಮಹಿಳೆಯರು ಸಖತ್ ಡ್ಯಾನ್ಸ್ ಮಾಡುವ ಮೂಲಕ ನೆರೆದಿದ್ದ ಪ್ರೇಕ್ಷಕರ ಗಮನ ಸೆಳೆದರು. ಲಂಬಾಣಿ ಸಮುದಾಯದ ಸಾಂಪ್ರದಾಯಿಕ ಉಡುಗೆ- ತೊಡುಗೆ ಧರಿಸಿ ಮಹಿಳೆಯರು ನೃತ್ಯ ಪ್ರದರ್ಶನ ಮಾಡಿದರು.