ETV Bharat / state

ಜಿಂದಾಲ್​ ಉಕ್ಕು ಕಾರ್ಖಾನೆಯ ಮತ್ತೋರ್ವ ಉದ್ಯೋಗಿಗೆ ಕೊರೊನಾ!

ಜಿಂದಾಲ್​ ಉಕ್ಕು ಕಾಖಾರ್ನೆಯಲ್ಲಿ ಕೆಲಸ ಮಾಡುತ್ತಿದ್ದ ಮತ್ತೋರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

Corona
Corona
author img

By

Published : Jun 4, 2020, 8:02 PM IST

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿರುವ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮತ್ತೋರ್ವನಲ್ಲಿ ಕೊರೊನಾ ಪತ್ತೆಯಾಗಿದ್ದು, ಇದೀಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ.

ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯ ಸಿಎಂಬಿ ಸೆಂಟರ್​ನಲ್ಲಿ ಕೆಲಸ‌ ಮಾಡುತ್ತಿದ್ದ 42 ವರ್ಷದ ಉದ್ಯೋಗಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಸಹೋದ್ಯೋಗಿಗಳಲ್ಲಿ ಆತಂಕ ಮೂಡಿದೆ.

ಕೊರೊನಾ ಪಾಸಿಟಿವ್ ಪತ್ತೆಯಾದ ವ್ಯಕ್ತಿ ಯಾವುದೇ ಸಾಂಸ್ಥಿಕ ಅಥವಾ ಹೋಂ ಕ್ವಾರಂಟೈನ್​ನಲ್ಲಿರಲಿಲ್ಲ. ಸೋಂಕಿತನ ಟ್ರಾವೆಲ್ ಹಿಸ್ಟರಿಯನ್ನ ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಲು ಮುಂದಾಗಿದ್ದಾರೆ. ಸದ್ಯ ಸೋಂಕಿತ ವ್ಯಕ್ತಿಯನ್ನ ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಜಿಂದಾಲ್ ಕಂಪನಿಯಲ್ಲಿ ಇದುವರೆಗೆ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕಂಪನಿಯ ಉಳಿದ ಉದ್ಯೋಗಿಗಳಲ್ಲಿ ಆತಂಕ‌ ಹೆಚ್ಚಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.