ಬಳ್ಳಾರಿ: ಅತಿಯಾದ ಮದ್ಯ ಸೇವನೆಯಿಂದ ಜಿಲ್ಲೆಯ ಕುರುಗೋಡು ತಾಲೂಕಿನ ಕುಡಿತಿನಿ ವೈನ್ ಶಾಪ್ ಬಳಿ ಕೂಲಿ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದಾನೆ.
ಜಿಲ್ಲೆಯ ಸಿರುಗುಪ್ಪ ತಾಲೂಕಿನ ಹಚ್ಚೊಳ್ಳಿ ಗ್ರಾಮದ ನಿವಾಸಿ ಗೋಪಾಲ (38) ಎಂಬ ಕೂಲಿ ಕಾರ್ಮಿಕ ಮೃತಪಟ್ಟವರೆಂದು ಗುರುತಿಸಲಾಗಿದೆ. ಕುಡಿತಿನಿ ಗ್ರಾಮದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದ ಈ ಕೂಲಿ ಕಾರ್ಮಿಕ ಅತಿಯಾಗಿ ಮದ್ಯ ಸೇವಿಸಿ ಸಾವನ್ನಪ್ಪಿರೋದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಜಿಲ್ಲೆಯ ಕುರುಗೋಡು ತಾಲೂಕಿನ ಕುಡಿತಿನಿ ವೈನ್ ಶಾಪ್ ನಲ್ಲಿ ಕಳೆದ ಮೂರು ದಿನಗಳಿಂದ ಮದ್ಯ ಸೇವನೆ ಮಾಡುತ್ತಿದ್ದು, ಮದ್ಯ ಸೇವನೆ ಎಲ್ಲೆ ಮೀರಿದ್ದರಿಂದ ಈ ಸಾವು ಸಂಭವಿಸಿದೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಕುಡಿತಿನಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.