ಬಳ್ಳಾರಿ: ಕೊರೊನಾ ವೈರಸ್ ಹರಡುವ ಭೀತಿಯಿಂದ ನಗರದ ಕೆಲ ಪ್ರದೇಶಗಳಲ್ಲಿ ಡಿಸಿ ಹಾಗೂ ಪಾಲಿಕೆ ಅಧಿಕಾರಿಗಳ ಸಮ್ಮುಖದಲ್ಲಿ ಔಷಧಿ ಸಿಂಪಡಣೆ ಮಾಡಲಾಯಿತು.
ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಹನುಮಂತಪ್ಪನವರ ಸಮ್ಮುಖದಲ್ಲಿ ಬಸ್ ನಿಲ್ದಾಣ, ಮಹಾನಗರ ಪಾಲಿಕೆ, ದುರ್ಗಮ್ಮ ಗುಡಿ, ರೈಲ್ವೆ ನಿಲ್ದಾಣ ಸೇರಿದಂತೆ ಹಲವೆಡೆ ಔಷಧಿ ಸಿಂಪಡಣೆ ಮಾಡಲಾಗಿದೆ.
ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ವೈರಸ್ ಹರಡದಂತೆ ಔಷಧಿ ಸಿಂಪಡಣೆ ಮಾಡಲಾಗಿದೆ ಎಂದು ತಿಳಿಸಿದರು.