ಬಳ್ಳಾರಿ: ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದಲ್ಲಿ ಯುಗಾದಿಗೆ ಉಚ್ಚಂಗಮ್ಮನ ಜಾತ್ರೆ ಪ್ರತಿವರ್ಷ ನಡೆಯುತ್ತಿತ್ತು. ಜಾತ್ರೆಗೆ ಕೊಪ್ಪಳದಿಂದ ಉಚ್ಚಂಗಿಗೆ ಸುಮಾರು 30 ಕ್ಕಿಂತ ಹೆಚ್ಚು ಮಂದಿ ಬಂದಿದ್ದು ಊಟ, ವಸತಿ ಇಲ್ಲದೆ ಪರದಾಡುತ್ತಿದ್ದರು. ಈ ಸುದ್ದಿ ತಿಳಿದ ತಕ್ಷಣವೇ ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂಸದ ಜೊತೆಗಿದ್ದ ಕೊರೊನಾ ಜಾಗೃತಿ ಸಮಿತಿಯ ಹರಪನಹಳ್ಳಿ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಭೀಮಾನಾಯ್ಕ್ ಅವರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚಿಸಿದ್ರು.
ನಂತರ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸರ್ವ ಸದಸ್ಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಉಚ್ಚಂಗಿದುರ್ಗ ಗ್ರಾಮಸ್ಥರ ನೇತೃತ್ವದಲ್ಲಿ ಬಡ ವ್ಯಾಪಾರಿಗಳಿಗೆ ದಿನ ಬಳಕೆ ವಸ್ತುಗಳನ್ನು ನೀಡಿದ್ರು. ವಿಶೇಷವಾಗಿ ಗ್ರಾಮ ಪಂಚಾಯಿತಿ ಸದಸ್ಯ ಕುಮಾರ, ಉಚ್ಚಂಗಿ ದುರ್ಗದಲ್ಲಿ ಬೀಡುಬಿಟ್ಟಿದ್ದ ಜನರಿಗೆ ಅಕ್ಕಿ ನೀಡಿ ಮಾನವೀಯತೆ ಮೆರೆದ್ರು.
ಉಚ್ಚಂಗಿದುರ್ಗದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಂಸದ, ಉಚ್ಚಂಗಿ ದೇಗುಲಕ್ಕೆ ಲಕ್ಷಾಂತರ ಭಕ್ತಾದಿಗಳು ಹಾಗೂ ಸುತ್ತಮುತ್ತಲಿನ 40 ಗ್ರಾಮಗಳಿಂದ ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸುತ್ತಾರೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉತ್ತಮ ಸೌಲಭ್ಯವನ್ನು ಒದಗಿಸಬೇಕು ಹಾಗೂ ಸಂತಾನ ಹರಣ ಚಿಕಿತ್ಸೆಯನ್ನು ಪ್ರಾರಂಭಿಸಬೇಕು ಎಂದು ತಾಲೂಕು ವೈದ್ಯಾಧಿಕಾರಿ ಇನಾಯತ್ಗೆ ತಿಳಿಸಿದರು.