ETV Bharat / state

ಲಂಚ ಪಡೆದ ಆರೋಪ: ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತೆ ಅಮಾನತು - municipal Commissioner Tusharamani suspended

ಲಂಚ ಪಡೆದ ಆರೋಪದ ಹಿನ್ನೆಲೆ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತೆ ಎಂ.ವಿ.ತುಷಾರಮಣಿ ಅವರನ್ನ ಅಮಾನತುಗೊಳಿಸಿ ನಗರಾಭಿವೃದ್ಧಿ ಪ್ರಾಧಿಕಾರದ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ವೀಣಾ ಆದೇಶ ಹೊರಡಿಸಿದ್ದಾರೆ.

municipal  Commissioner Tusharamani
ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ
author img

By

Published : Oct 17, 2020, 8:42 AM IST

ಬಳ್ಳಾರಿ: ಅರ್ಜಿ ನಮೂನೆ 3 ನೀಡಲು ಅಂದಾಜು 5 ಲಕ್ಷ ರೂ. ಲಂಚ ಬೇಡಿಕೆ ಇಟ್ಟಿದ್ದಾರೆಂಬ ವಿಡಿಯೋ- ಆಡಿಯೋ ತುಣುಕೊಂದು ವೈರಲ್ ಆದ ಹಿನ್ನೆಲೆಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತೆ ಎಂ.ವಿ.ತುಷಾರಮಣಿ ಅವರನ್ನ ಅಮಾನತುಗೊಳಿಸಿ ನಗರಾಭಿವೃದ್ಧಿ ಪ್ರಾಧಿಕಾರದ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ವೀಣಾ ಆದೇಶ ಹೊರಡಿಸಿದ್ದಾರೆ.

suspension order Letter
ಅಮಾನತು ಆದೇಶ ಪ್ರತಿ
suspension order Letter
ಅಮಾನತು ಆದೇಶ ಪ್ರತಿ

ಬಳ್ಳಾರಿ ಜಿಲ್ಲಾಧಿಕಾರಿಯವರು ಬರೆದ ಪತ್ರವನ್ನಾಧರಿಸಿ ಮಹಾನಗರ ಪಾಲಿಕೆ ಆಯುಕ್ತೆ ಎಂ.ವಿ.ತುಷಾರಮಣಿ ಅವರನ್ನ ಅಮಾನತುಗೊಳಿಸಲಾಗಿದೆ. ಇದಲ್ಲದೆ ಪ್ರಭಾರಿ ಆಯುಕ್ತರನ್ನಾಗಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಈರಪ್ಪ ಬಿರಾದಾರ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಜಿಲ್ಲಾಧಿಕಾರಿಯವರ ಪತ್ರದಲ್ಲಿ ಏನಿದೆ?: ಅ. 15ರಂದು ಜಿಲ್ಲಾಧಿಕಾರಿಗಳು ನಗರಾಭಿವೃದ್ಧಿ ಪ್ರಾಧಿಕಾರ ಇಲಾಖೆಗೆ ಪತ್ರವೊಂದನ್ನ ಬರೆದಿದ್ದಾರೆ. ಬಳ್ಳಾರಿ ಮಹಾನಗರಪಾಲಿಕೆಯಲ್ಲಿ ಅ. 9ರಂದು ಮಧ್ಯಾಹ್ನ 12.08 ಗಂಟೆ ಸುಮಾರಿಗೆ ಭ್ರಷ್ಟಾಚಾರ ನಿಗ್ರಹ ದಳದ ದಾಳಿಯಲ್ಲಿ ಪಾಲಿಕೆ ಆಯುಕ್ತರ ಆಪ್ತ ಸಹಾಯಕರಾದ ಮಲ್ಲಿಕಾರ್ಜುನ ಎಸ್. ಪಾಟೀಲ್ ಎಸ್​ಡಿಎ ಮತ್ತು ಎಸ್.ಭಾಷ, ಹೊರಗುತ್ತಿಗೆ ಅಟೆಂಡರ್ ಅವರುಗಳನ್ನು ಲಂಚದ ಹಣ ರೂ. 50,000 ಪಡೆಯುವಾಗ ದಸ್ತಗಿರಿ ಮಾಡಿರುತ್ತಾರೆ.

ಈ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಇನ್ಸ್​ಪೆಕ್ಟರ್ ಬಳ್ಳಾರಿ ಇವರ ಪತ್ರ ಸಂಖ್ಯೆ:ಎ.ಸಿ.ಬಿ/ಸಿ.ಅರ್-10/2020, ಅ. 12ರಲ್ಲಿ ಸಲ್ಲಿಸಿದ ದೂರಿನಲ್ಲಿ ಅ. 9ರಂದು ಘನ ವಿಶೇಷ ಜಿಲ್ಲಾ ಪ್ರಧಾನ ಮತ್ತ ಸತ್ರ ನ್ಯಾಯಾಧೀಶರು, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ, ಬಳ್ಳಾರಿ ಅವರ ಮುಂದೆ ಹಾಜರುಪಡಿಸಿದ್ದಾರೆ‌. ಘನ ನ್ಯಾಯಾಲಯವು ಆರೋಪಿತ ನೌಕರರಿಗೆ ಅ. 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ ಎಂದು ವರದಿ ಮಾಡಿರುತ್ತಾರೆ.

ಅಧ್ಯಕ್ಷರು ನವ ಕರ್ನಾಟಕ ಯುವಶಕ್ತಿ ಬಳ್ಳಾರಿ ಇವರ ದೂರಿನ ಮನವಿ ಅ. 15ರಲ್ಲಿ ಫಾರಂ-3 ಪಡೆಯಲು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತೆ ಎಂ.ವಿ.ತುಷಾರಮಣಿ ಅವರು ಲಂಚದ ಬೇಡಿಕೆ ಇಟ್ಟು ಲಂಚ ಸ್ವೀಕರಿಸಿ ಆಯುಕ್ತರ ಪದವಿಯ ಘನತೆಗೆ ಧಕ್ಕೆ ತಂದಿದ್ದಾರೆ. ಸದರಿಯವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮನವಿ ಮಾಡಿರುತ್ತಾರೆಂದು ತಿಳಿಸುತ್ತಾ, ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ ಇವರಿಗೆ ರೂ. 5 ಲಕ್ಷ ಹಣದ ಬಗ್ಗೆ (ವಾಟ್ಸ್ ಆ್ಯಪ್ ಸಂದೇಶಗಳಲ್ಲಿ ಮಾತುಕತೆ ನಡೆಸಿರುವ) ಆಡಿಯೋ ಸಂಭಾಷಣೆ ಹಾಗೂ ವಿಡಿಯೋ ಕ್ಲಿಪ್​​ಗಳನ್ನು ಸಿಡಿ ರೂಪದಲ್ಲಿ ಸಲ್ಲಿಸಲಾಗಿದೆ.

ಈ ಎಲ್ಲಾ ವಿದ್ಯಮಾನಗಳಿಂದಾಗಿ ಬಳ್ಳಾರಿ ಮಹಾನಗರ ಪಾಲಿಕೆ ದೈನಂದಿನ ಕೆಲಸ-ಕಾರ್ಯಗಳಲ್ಲಿ ಮುಜುಗರ ಉಂಟಾಗಿದ್ದು, ಕಾರಣ ಸದರಿ ವಿಷಯದ ಬಗ್ಗೆ ಸರ್ಕಾರದ ಹಂತದಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಕೋರಿರುತ್ತಾರೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರಾಗಿರುವ ಎಂ.ವಿ.ತುಷಾರಮಣಿ ವಿರುದ್ಧ ಜಿಲ್ಲಾಧಿಕಾರಿಗಳು, ಬಳ್ಳಾರಿ ಜಿಲ್ಲೆ ನೀಡಿರುವ ವರದಿಯಿಂದ ಸದರಿಯವರ ವಿರುದ್ಧ ಆರೋಪವು ಮೇಲ್ನೋಟಕ್ಕೆ ಸಾಬೀತಾಗಿರುವುದನ್ನ ಮನಗಂಡು ಈ ಅಧಿಕಾರಿಯು 1988ರ ಭ್ರಷ್ಟಾಚಾರ ನಿರ್ಮೂಲನಾ ಕಾಯ್ದೆ ಕಲಂ 13(1)(a) ಮತ್ತು ಇದರೊಂದಿಗೆ ಹೊಂದಿಕೊಂಡ 13(2)ರಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಸಗಿರುವುದಲ್ಲದೆ, 1966ರ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು ನಿಯಮ 3(id) ಉಲ್ಲಂಘಿಸಿರುವುದು ಕಂಡು ಬರುತ್ತದೆ.

ಆದ್ದರಿಂದ ಬಳ್ಳಾರಿ ಜಿಲ್ಲಾಧಿಕಾರಿಗಳ ವರದಿಯ ಹಿನ್ನೆಲೆಯಲ್ಲಿ ಆಯುಕ್ತೆ ಎಂ.ವಿ.ತುಷಾರಮಣಿ ಅವರನ್ನ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿಡಲು ತೀರ್ಮಾನಿಸಿ ಆದೇಶಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳ ಹಿನ್ನೆಲೆಯಲ್ಲಿ ಆಯುಕ್ತೆ ಎಂ.ವಿ.ತುಷಾರಮಣಿ ವಿರುದ್ಧ ದುರ್ನಡತೆಗಾಗಿ‌ ಅವರನ್ನ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 19(1)(ಎ) ಅನ್ವಯ ಇಲಾಖಾ ವಿಚಾರಣೆ ಕಾಯ್ದಿರಿಸಿ, ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸೇವೆಯಿಂದ‌ ಅಮಾನತುಪಡಿಸಿ ಆದೇಶಿಸಿದೆ.

ಈ ಅಧಿಕಾರಿ ನಿಯಮಾನುಸಾರವಾಗಿ ಜೀವನಾಧಾರ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಹಾಗೂ ಸದರಿ ಅಧಿಕಾರಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಎಂದು ಸೂಚನೆ ನೀಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.