ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ವಾರ್ಡ್ಗಳಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿಗಳು ನಾಯಕರೊಂದಿಗೆ ಆಗಮಿಸಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.
24ನೇ ವಾರ್ಡಿನಿಂದ ಬಳ್ಳಾರಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಕಾರ್ಪೊರೇಟರ್ ಶ್ರೀನಿವಾಸ್ ಮೋತ್ಕರ್ ಅವರು ತಮ್ಮ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
19ನೇ ವಾರ್ಡಿನಿಂದ ಬಿಜೆಪಿ ಅಭ್ಯರ್ಥಿ, ಯುವ ಧುರೀಣ, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಡಾ.ಕೆ.ಎಸ್. ಅಶೋಶ್ ಕುಮಾರ್ ಅವರು ಪಕ್ಷದ ಕಾರ್ಯಕರ್ತರು, ಬೆಂಬಲಿಗರು, ಅಭಿಮಾನಿಗಳೊಂದಿಗೆ ಮೆರವಣಿಗೆ ಮೂಲಕ ಜಾನಪದ ಕಲಾ ವಾದ್ಯಗಳೊಂದಿಗೆ ಕಚೇರಿಗೆ ತೆರಳಿ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಓದಿ: ಕಾಶ್ಮೀರದಲ್ಲಿ 7 ಮಂದಿ ಉಗ್ರರ ಬೇಟೆ: ಮೂವರು ನಾಗರಿಕರು, ನಾಲ್ವರು ಭದ್ರತಾ ಸಿಬ್ಬಂದಿಗೆ ಗಾಯ
22 ನೇ ವಾರ್ಡಿನಿಂದ ಬಳ್ಳಾರಿ ಮಹಾನಗರ ಪಾಲಿಕೆಯ ಸದಸ್ಯತ್ವ ಬಯಸಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೆ.ಹನುಮಂತ ಅವರು ನಾಮಪತ್ರ ಸಲ್ಲಿಸಿದರು.
14ನೇ ವಾರ್ಡಿನಿಂದ ಬಿಜೆಪಿ ಪ್ರಮುಖ ಧುರೀಣ ಹಾಗೂ ಮಾಜಿ ಕಾರ್ಪೊರೇಟರ್ ವಿ.ನಾಗಭೂಷಣ್ ಅವರ ಪತ್ನಿ ಕವಿತಾ ನಾಗಭೂಷಣ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ದೇವಸ್ಥಾನದಲ್ಲಿ ಪೂಜೆ ನೆರವೇರಿಸಿ ನಂತರ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.