ಬಳ್ಳಾರಿ: ಮಹಿಳೆಯರು ಉತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಕೊಂಡು ಅರ್ಥಿಕವಾಗಿ ಸದೃಢರಾಗಬೇಕು ಎಂದು ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕಿ ಅಪರ್ಣಾ ಕೋಲ್ತೆ ಸಲಹೆ ನೀಡಿದರು.
ಹೊಸಪೇಟೆ ತಾಲೂಕಿನ ವೆಂಕಟಾಪುರ 76 ಕ್ಯಾಂಪ್ನಲ್ಲಿ ಸ್ಥಿರಾ ಸಂಸ್ಥೆಯ ಸಹಯೋಗದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ ಪೇಪರ್ ಬ್ಯಾಗ್, ಮಾಸ್ಕ್, ವಯರ್ ಬ್ಯಾಗ್ ತಯಾರಿಸುವ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳೆಯರು ಉತ್ಪಾದನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕುಟುಂಬದ ಅಭಿವೃದ್ಧಿಯ ಜೊತೆಗೆ ದೇಶದ ಏಳಿಗೆಗಾಗಿ ಎಲ್ಲರೂ ಶ್ರಮಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಸ್ಥಿರಾ ಸಂಸ್ಥೆಯ ಕಾರ್ಯದರ್ಶಿ ಬಿ.ರೇಣುಕಾ ಮಾತನಾಡಿ, 15 ದಿನ ತರಬೇತಿ ಅವಧಿಯಲ್ಲಿ ಮಹಿಳೆಯರಿಗೆ ಸಾಮಾಜಿಕ ಅಂತರದಲ್ಲಿ ಕೂರಿಸಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವ ಮೂಲಕ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. 30 ಜನ ಮಹಿಳೆಯರು ಈ ತರಬೇತಿಯಲ್ಲಿ ಪಾಲ್ಗೊಂಡಿದ್ದರು. ಈ ತರಬೇತಿಗೆ ನಬಾರ್ಡ್ ಪ್ರಾಯೋಜಕರಾಗಿದ್ದಾರೆ ಎಂದರು.