ಬಳ್ಳಾರಿ: ನೂತನ ಜಿಲ್ಲಾಧಿಕಾರಿಯಾಗಿ ಎಸ್.ಎಸ್.ನಕುಲ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ನಿತೀಶ್ಕುಮಾರ್ ಅವರು ಹೂ ಗುಚ್ಚ ನೀಡುವ ಮೂಲಕ ಡಿಸಿ ನಕುಲ್ ಅವರಿಗೆ ಸ್ವಾಗತ ಕೋರಿದರು.
ಆ ಬಳಿಕ ಕಚೇರಿಯ ಕಡತಗಳ ಪರಿಶೀಲನೆ ನಡೆಸಿ, ಕೆಲಕಾಲ ಜಿಲ್ಲೆಯ ಸರ್ಕಾರಿ ಇಲಾಖೆಗಳ ಮಾಹಿತಿ ಪಡೆದರು. ಈ ಹಿಂದೆ ನಕುಲ್ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯನಿರ್ವಹಿಸಿದ್ದರು. ಈಗ ಮತ್ತೊಮ್ಮೆ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಬೆಂಗಳೂರಿನ ಐಟಿ, ಬಿಟಿಯ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಕುಲ್ ಅವರನ್ನ ರಾಜ್ಯ ಸರ್ಕಾರ ಬಳ್ಳಾರಿ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿ ಆದೇಶ ಹೊರಡಿಸಿತ್ತು.