ಬಳ್ಳಾರಿ: ರಾಜ್ಯ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಪ್ರವಾಹದ ವೇಳೆ ಕೈಗೊಂಡ ಪರಿಹಾರ ಕಾರ್ಯಗಳ ಬೃಹತ್ ಛಾಯಾಚಿತ್ರ ಪ್ರದರ್ಶನಕ್ಕೆ ಕೇಂದ್ರ ಬಸ್‍ನಿಲ್ದಾಣದಲ್ಲಿ ಚಾಲನೆ ನೀಡಲಾಯ್ತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಏರ್ಪಡಿಸಿದ್ದ ಈ ಛಾಯಾಚಿತ್ರ ಪ್ರದರ್ಶನ ಗಮನ ಸೆಳೆಯಿತು. ಸರ್ಕಾರದ ನಾನಾ ಅಭಿವೃದ್ಧಿ ಕಾರ್ಯಕ್ರಮಗಳ ಅನಾವರಣವಾಯಿತು. ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಈ ಬೃಹತ್ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.