ಬಳ್ಳಾರಿ: ದೆಹಲಿಯ ತಬ್ಲೀಘ್ ಜಮಾಅತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜಿಲ್ಲೆಯ ಜನರು ಸ್ವಯಂ ಪ್ರೇರಣೆಯಿಂದ ಕೊರೊನಾ ಪರೀಕ್ಷೆಗೆ ನಡೆಸಿಕೊಳ್ಳಬೇಕು ಎಂದು ಎಸ್ಪಿ ಸಿ.ಕೆ.ಬಾಬಾ ಮನವಿ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಪ್ರಾಣಕ್ಕೆ ಯಾವ ಧರ್ಮ ಭೇದ ಭಾವವಿಲ್ಲ, ಪ್ರತಿಯೊಬ್ಬರ ಆರೋಗ್ಯ ಮತ್ತು ಜೀವ ರಕ್ಷಣೆ, ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಹೊಣೆಯಾಗಿದೆ ಎಂದಿದ್ದಾರೆ.
ಕೊರೊನಾ ಪರೀಕ್ಷೆ ಮಾಡಿಸಲು ನಿರ್ಲಕ್ಷ್ಯವಹಿಸಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.