ಬಳ್ಳಾರಿ: ಭೋವಿ ವಡ್ಡರ ಸಮಾಜದ ಅಭಿವೃದ್ಧಿಗೆ ಸಮುದಾಯ ಭವನ, ಹಾಸ್ಪೆಲ್ ಸೌಲಭ್ಯ ಅಗತ್ಯವಿದೆ. ಹಾಗಾಗಿ ಸರ್ಕಾರ ಈ ಸೌಲಭ್ಯಗಳನ್ನು ನೀಡಬೇಕು ಎಂದು ಜಿಲ್ಲಾ ಭೋವಿ ವಡ್ಡರ ಸಂಘದ ಪ್ರಧಾನ ಕಾರ್ಯದರ್ಶಿ ಗಾದಿಲಿಂಗ ಮನವಿ ಮಾಡಿದರು.
ನಗರದ ಬಿಡಿಎಎ ಒಳ ಸಭಾಂಗಣದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ರಾಜ್ಯದ ಅನೇಕ ಸಮಾಜಗಳಿಗೆ ಸರ್ಕಾರದ ಕಡೆಯಿಂದ ಸಮುದಾಯ ಭವನಗಳು, ಕಲ್ಯಾಣ ಮಂಟಪಗಳು, ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಸ್ಟೆಲ್ಗಳು, ಜನರಿಗೆ ಮನೆಗಳು ಇವೆ. ಆದ್ರೆ ಬಳ್ಳಾರಿ ಜಿಲ್ಲೆಯಲ್ಲಿನ ಭೋವಿ ಸಮಾಜದ ಜನರಿಗೆ ಸಮುದಾಯ ಭವನ, ಕಲ್ಯಾಣ ಮಂಟಪ್ಪ, ವಸತಿ ಗೃಹಗಳು ಮತ್ತು ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಹಾಸ್ಟೆಲ್ ಸೌಲಭ್ಯ ಬೇಕಾಗಿದೆ. ಹಾಗಾಗಿ ಸಮಾಜದ ಜನರು ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸರ್ಕಾರ ಈ ಸೌಲಭ್ಯಗಳನ್ನು ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.
ಈ ಸುದ್ದಿಯನ್ನೂ ಓದಿ: ಹರಜಾತ್ರೆಯಲ್ಲಿ ಸಿಎಂ ಯಡಿಯೂರಪ್ಪ ಭಾಗಿ: ಎಳ್ಳು- ಬೆಲ್ಲ ಹಂಚಿ ಸಂಕ್ರಾಂತಿ ಆಚರಣೆ
ಬಳ್ಳಾರಿ ಜಿಲ್ಲೆಯಲ್ಲಿ 1 ಲಕ್ಷದ 70 ಸಾವಿರ ಜನರು ಈ ಸಮುದಾಯದವರಿದ್ದಾರೆ. ಅದರಲ್ಲಿ ಬಳ್ಳಾರಿ ನಗರದಲ್ಲೇ 70 ಸಾವಿರ ಜನರು ಇದ್ದು, ಸೂಕ್ತ ಸೌಲಭ್ಯದ ಅವಶ್ಯಕತೆ ಇದೆ ಎಂದರು. ಈ ಹಿಂದೆ ಅನೇಕ ಬಾರಿ ಬಳ್ಳಾರಿ ಜಿಲ್ಲೆಯ ಶಾಸಕರಿಗೆ ಮತ್ತು ಸಂಸದರಿಗೆ ಮನವಿ ಸಹ ಮಾಡಿದ್ದು, ಈಡೇರಿಸುವ ಭರವಸೆ ನೀಡಿದ್ದಾರೆ ಎಂದರು.