ಬಳ್ಳಾರಿ/ಹೊಸಪೇಟೆ: ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಕೊಂಡನಾಯಕನ ಹಳ್ಳಿಯಿಂದ ನಂ.82 ಡಣಾಪುರ ರಸ್ತೆವರೆಗೆ ಅಯ್ದ ಭಾಗಗಳಲ್ಲಿ ಒಟ್ಟು 1 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಲೋಕೋಪಯೊಗಿ ಇಲಾಖೆಯ 2019-20ನೇ ಸಾಲಿನ ಅಪೆಂಡಿಕ್ಸ್-ಇ ಯೋಜನೆಯಡಿಯಲ್ಲಿ ಮಂಜೂರಾದ 1 ಕೋಟಿ ರೂ. ವೆಚ್ಚದಲ್ಲಿ ಕೊಂಡನಾಯಕನಹಳ್ಳಿಯಿಂದ ನಂ.82 ಡಣಾಪುರ ಮಾರ್ಗದ ರಸ್ತೆಯ ವಿವಿಧ ಆಯ್ದ ಭಾಗಗಳಲ್ಲಿ ಮರು ಡಾಂಬರೀಕರಣ ಕಾಮಗಾರಿಗೆ ಹೊಸಪೇಟೆ ತಾಲೂಕು ಪಂಚಾಯತ್ ಅಧ್ಯಕ್ಷರಾದ ನಾಗವೇಣಿ ಬಸವರಾಜ್ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಹುಡಾ ಅಧ್ಯಕ್ಷ ಅಶೋಕ್ ಜೀರೆ, ಹುಡಾ ಮಾಜಿ ಅಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕ ಧಮೇಂದ್ರ ಸಿಂಗ್, ಲೋಕೋಪಯೋಗಿ ಇಲಾಖೆಯ ಅಧಿಕಾರಿ ಲಕ್ಷ್ಮಣ ಸೇರಿದಂತೆ ಎಲ್.ಸಿದ್ಧನಗೌಡ, ಬಸವರಾಜ, ಆರ್.ಕೊಟ್ರೇಶ್ ಹಾಗೂ ಗ್ರಾಮದ ಮುಖಂಡರು ಇದ್ದರು.