ಬಳ್ಳಾರಿ : ಜಿಲ್ಲೆಯ ಹರಪನಹಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಬಾಣದಗೆರೆ ಕ್ರಾಸ್ ಬಳಿ ನಿನ್ನೆ ರಾತ್ರಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಯುವಕನ ಗುರುತು ಪತ್ತೆಯಾಗಿಲ್ಲ. ಮೃತ ಯುವಕ ಅಂದಾಜು 25 ವರ್ಷ ವಯಸ್ಸಿನವರಿಬಹುದೆಂದು ಅಂದಾಜಿಸಲಾಗಿದೆ. ಯುವಕನಿಗೆ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿದ್ದರಿಂದ, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಹರಪನಹಳ್ಳಿ ಪೊಲೀಸರು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಓದಿ:ಊಟ ಕೊಡಿಸುವುದಾಗಿ ಕರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ನಾಲ್ವರ ಬಂಧನ