ETV Bharat / state

​ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಬೈಕ್​​​ ಸವಾರ ಸಾವು - ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮ

ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮಕ್ಕೆ ತೆರಳುವ ಮಾರ್ಗದ ತಿರುವಿನಲ್ಲಿ ಅಪರಿಚಿತ ವಾಹನವೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

​ಅಪರಿಚಿತ ವಾಹನ ಡಿಕ್ಕಿ...ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್​ ಸವಾರ
author img

By

Published : Oct 27, 2019, 10:31 AM IST

ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮಕ್ಕೆ ತೆರಳುವ ಮಾರ್ಗದ ತಿರುವಿನಲ್ಲಿ ಅಪರಿಚಿತ ವಾಹನವೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದ ರಾಜಶೇಖರ(46) ಮೃತ ದುರ್ದೈವಿ. ಇವರು ತಾಲೂಕಿನ ಕೆ.ಸೂಗೂರು ಗ್ರಾಮದಲ್ಲಿನ ತಮ್ಮ ಸಂಬಂಧಿಕರ ಮನೆಗೆ ತೆರಳಿ ವಾಪಾಸ್ ಬರುವಾಗ ಕರ್ಚಿಗನೂರು ಗ್ರಾಮ ಮಾರ್ಗದ ತಿರುವಿನ ಬಳಿ ಯಮಸ್ವರೂಪಿಯಂತೆ ಬಂದ ಅಪರಿಚತ ವಾಹನವೊಂದು ಬೈಕ್​ಗೆ ಡಿಕ್ಕಿ ಹೊಡೆದಿದೆ. ರಾಜಶೇಖರ ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಸಿರುಗುಪ್ಪ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಸಿಪಿಐ ಮಹಾಂತೇಶ ಸಜ್ಜನ್ ಮತ್ತು ಪಿಎಸ್​ಐ ಗಂಗಪ್ಪ ಬುರ್ಲಿ ಭೇಟಿ ನೀಡಿ 'ಹಿಟ್ ಅಂಡ್ ರನ್' ಎಂದು ಶಂಕಿಸಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Intro:ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ: ರಕ್ತದ ಮಡುವಿನಲ್ಲಿ ಬಿದ್ದು ಸವಾರ ಸಾವು
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮಕ್ಕೆ ತೆರಳುವ ಮಾರ್ಗದ ತಿರುವಿನ ಬಳಿ ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದ ರಾಜಶೇಖರ
(46) ಎಂದು ಗುರುತಿಸಲಾಗಿದೆ. ತಾಲೂಕಿನ ಕೆ.ಸೂಗೂರು ಗ್ರಾಮದಲ್ಲಿನ ತಮ್ಮ ಸಂಬಂಧಿಕರ ಮನೆಗೆ ತೆರಳಿ ವಾಪಾಸ್ ಬರುವಾಗ ಕರ್ಚಿಗನೂರು ಗ್ರಾಮ ಮಾರ್ಗದ ತಿರುವಿನ ಬಳಿ
ಬೈಕ್ ನಲ್ಲಿ ಸಂಚರಿಸುತ್ತಿರುವಾಗ ಯಮಸ್ವರೂಪಿಯಂತೆ ಬಂದ ಅಪರಿಚತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ರಕ್ತದ‌ ಮಡುವಿನಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ.
Body:ಆತನ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು ಹೆಚ್ಚಿನ ಪ್ರಮಾಣದ ರಕ್ತಸ್ರಾವ ವಾಗಿದೆ. ಬೈಕ್ ನುಜ್ಜು ಗುಜ್ಜಾಗಿದ್ದು ಅಪಘಾತದ ಬಗ್ಗೆ ನಿಖರವಾದ ಮಾಹಿತಿಯಿಲ್ಲ. ಸಿರುಗುಪ್ಪ ಠಾಣೆಯ ವ್ಯಾಪ್ತಿಯಲ್ಲೇ ಈ ಘಟನೆ ಸಂಭವಿಸಿದ್ದು, ಇಳಿ ಸಂಜೆಯ ಹೊತ್ತಿನಲ್ಲೇ ಈ ಘಟನೆ ನಡೆದಿರಬಹುದೆಂದು ಹೇಳಲಾಗುತ್ತೆ.
ಸಿ.ಪಿ.ಐ. ಮಹಾಂತೇಶ ಸಜ್ಜನ್ ಮತ್ತು ಪಿ.ಎಸ್.ಐ. ಗಂಗಪ್ಪ ಬುರ್ಲಿ ಸಿಬ್ಬಂದಿಗಳೊಡನೆ ಘಟನಾ ಸ್ಥಳಕ್ಕೆ ತೆರಳಿ 'ಹಿಟ್ ಆ್ಯಂಡ್ ರನ್' ಎಂದು ಶಂಕಿಸಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_1_HIT_AND_RUN_ACCIDENT_NEWS_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.