ಬಳ್ಳಾರಿ: ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಜಿಲ್ಲೆಯ ಕೂಡ್ಲಿಗಿ-ಮೊರಬ ಕ್ರಾಸ್ ಹತ್ತಿರದ ರಾಷ್ಟ್ರೀಯ ಹೆದ್ಧಾರಿ 50ರಲ್ಲಿ ನಡೆದಿದೆ.
![bike and car accident in bellary](https://etvbharatimages.akamaized.net/etvbharat/prod-images/kn-03-bly-080920-accident-news-ka10007_08092020143948_0809f_1599556188_558.jpg)
ಜಿಲ್ಲೆಯ ಸಂಡೂರು ತಾಲೂಕಿನ ಬಂಡ್ರಿ ಗ್ರಾಮದ ಕೆ.ಉಮೇಶ್ (30) ಮೃತ. ಇನ್ನೂ ಬೈಕ್ನ ಹಿಂಬದಿ ಕುಳಿತಿದ್ದ ಸವಾರ ತೀವ್ರವಾಗಿ ಗಾಯಗೊಂಡಿದ್ದು, ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.