ಹೊಸಪೇಟೆ: ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿನಹಳ್ಳಿ ರಸ್ತೆಯಲ್ಲಿ ಭಾನುವಾರ ರಾತ್ರಿ ಬೈಕ್ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಓದಿ: ಹಂದಿಗೆ ಡಿಕ್ಕಿ ತಪ್ಪಿಸಲು ಹೋಗಿ ಹಳ್ಳಕ್ಕೆ ಬಿದ್ದ ಗೂಡ್ಸ್ ವಾಹನ : 8 ಜನರಿಗೆ ಗಾಯ
ಉತ್ತರಪ್ರದೇಶ ಮೂಲದ ಮನೀಶ್ ಶ್ರೀವಾಸ್ತವ (21) ಮೃತ ಸವಾರ. ಮತ್ತೊಬ್ಬ ಹಿಂಬದಿ ಸವಾರ ಮನೋರಂಜನ್ ರಾಯ್ ಗಾಯಗೊಂಡಿದ್ದಾನೆ. ಚಿಕ್ಕಜೋಗಿಹಳ್ಳಿ ಎಟಿಎಂಗೆ ಹೋಗಿ ಬರುವಾಗ ದುರ್ಘಟನೆ ಸಂಭವಿಸಿದೆ.
ಮೃತ ವ್ಯಕ್ತಿ ಸ್ಥಳೀಯ ಎಲ್&ಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.