ಬಳ್ಳಾರಿ: ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಚಲಾಯಿಸುತ್ತಿದ್ದ ಟ್ರಾಫಿಕ್ ಪೊಲೀಸ್ ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಡತಿನಿ ಗ್ರಾಮದ ಬಳಿ ನಡೆದಿದೆ. ಗಂಗಾವತಿ ತಾಲೂಕಿನ ಹೇರೂರು ಗ್ರಾಮದ ವಿರೂಪಣ್ಣ (31) ಸಾವಿಗೀಡಾಗಿದ್ದಾರೆ.
ಬಳ್ಳಾರಿ ಪೊಲೀಸ್ ಇಲಾಖೆಯಲ್ಲಿ ಸೇವೆಯಲ್ಲಿದ್ದ ಇವರನ್ನು ಇತ್ತೀಚೆಗೆ ಕಂಪ್ಲಿಗೆ ವರ್ಗಾವಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಬಳ್ಳಾರಿಯಿಂದ ಕಂಪ್ಲಿಗೆ ಹೊರಟಿದ್ದಾಗ ಕುಡತಿನಿ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಂಧ್ರಪ್ರದೇಶಕ್ಕೆ ಹೋಗುತ್ತಿದ್ದ ಲಾರಿ ಇವರ ಬೈಕಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ವಿರೂಪಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕನನ್ನು ಕುಡತಿನಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಕಾರ್ಮಿಕ ಮುಖಂಡನಿಗೆ ಛೀಮಾರಿ ಹಾಕಿದ ಕಲಬುರಗಿ ಜಿಲ್ಲಾಧಿಕಾರಿ: ಏಕೆ ಗೊತ್ತೇ?