ಬಳ್ಳಾರಿ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾ ಹೊಸಹಳ್ಳಿ ಸಮೀಪದ ಅಮಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ನಡೆದಿದೆ.
ಐಗಳಮಲ್ಲಪುರ ಗ್ರಾಮದ ತಿಪ್ಪಣ್ಣ (50) ಮೃತ ವ್ಯಕ್ತಿ. ರಾಷ್ಟ್ರೀಯ ಹೆದ್ದಾರಿ ಎನ್ ಹೆಚ್ 50 ರಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿದ್ದ ವಾಟ್ಸ್ಆ್ಯಪ್ ಗ್ರೂಪ್ನ ಸದಸ್ಯರು ತಕ್ಷಣ ಬೈಕ್ ಸವಾರನನ್ನು ಆ್ಯಂಬುಲೆನ್ಸ್ ಮೂಲಕ ಕೂಡ್ಲಿಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬೈಕ್ ಸವಾರ ನಿನ್ನೆ ಸಂಜೆ ಮೃತಪಟ್ಟಿದ್ದಾರೆ.
ಈ ಸಂಬಂಧ ಕೂಡ್ಲಿಗಿ ತಾಲೂಕಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.