ಹೊಸಪೇಟೆ: ಬಿಜೆಪಿ ಸರ್ಕಾರ ಕೊರೊನಾ ಸೋಂಕು ನಿಯಂತ್ರಣದಲ್ಲಿ ಸಂಪೂರ್ಣ ವಿಫಲವಾಗಿದೆ. ಅಲ್ಲದೇ, ಮಹಿಳೆಯರ ಹಿತಾಸಕ್ತಿ ಕಾಪಾಡುವಲ್ಲಿ ಎಡವಿದೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಪುಷ್ಪ ಅಮರನಾಥ ಆರೋಪಿಸಿದರು.
ನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ವಿಜಯನಗರ ಕ್ಷೇತ್ರದ ಮಹಿಳಾ ಕಾಂಗ್ರೆಸ್ ಘಟಕದ ಪದಾಧಿಕಾರಿಗಳ ಮತ್ತು ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮಾತನಾಡಿದ ಪುಷ್ಪ ಅಮರನಾಥ, ಪ್ರಸ್ತುತ ಜನಸಾಮಾನ್ಯರು ಸಂಕಷ್ಟಗಳನ್ನು ಅನುಭವಿಸುವಂತಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಕ್ಷೇತ್ರದಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮಹಿಳೆಯರಿಗೆ ತಿಳಿಸುವ ಮೂಲಕ ಪಕ್ಷವನ್ನು ಸಂಘಟಿಸಬೇಕು ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎನ್. ಮೊಹಮ್ಮದ್ ಇಮಾಮ್ ನಿಯಾಜಿ ಅವರು ಮಾತನಾಡಿ, ಕ್ಷೇತ್ರದ ಎಲ್ಲಾ ಘಟಕಗಳಲ್ಲಿ ಕಾರ್ಯಕರ್ತರು ಸಕ್ರಿಯರಾಗಿ ಭಾಗವಹಿಸಬೇಕು ಎಂದರು.