ಬಳ್ಳಾರಿ: ಬಿಜೆಪಿ ಆಡಳಿತದಿಂದ ರಾಜ್ಯದಲ್ಲಿ ದುರಾಡಳಿತ ಹೆಚ್ಚಾಗಿದೆ. ಕೇಂದ್ರ ಸರ್ಕಾರ ದೇಶದಲ್ಲಿ ಸೈನಿಕರನ್ನು ದುರ್ಬಲಗೊಳಿಸುತ್ತಿದೆ. ಸುಳ್ಳನ್ನೇ ಸತ್ಯವೆಂದು ನಂಬಿಸಿ ಯುವಕರ ದಾರಿ ತಪ್ಪಿಸುತ್ತಿದೆ. ಕರ್ನಾಟಕ ಮಾದರಿಯಲ್ಲಿ ಮಹಾರಾಷ್ಟ್ರದ ಶಾಸಕರಿಗೆ 50 ಕೋಟಿ ರೂ ನೀಡುತ್ತಿದೆ. ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರವನ್ನು ಬೀಳಿಸುವ ಯತ್ನ ನಡೆಯುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದರು.
ಬಳ್ಳಾರಿ ಜಿಲ್ಲೆಯ ಸಂಡೂರಿನ ತಾರಾನಗರ ನಾರಿಹಳ್ಳದ ಎದುರಿನ ವಂಡರ್ ಮೌಂಟೇನ್ ವ್ಯಾಲಿ ರೆಸಾರ್ಟ್ನಲ್ಲಿ ಬಳ್ಳಾರಿ ನಗರದ ಹಾಗೂ ಬಳ್ಳಾರಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ನವ ಸಂಕಲ್ಪ ಶಿಬಿರ ಉದ್ದೇಶಿಸಿ ಮಾತನಾಡಿದರು.
ಇದನ್ನೂ ಓದಿ: ಸುರಕ್ಷಿತ ಕ್ಷೇತ್ರ ಹುಡುಕುವ ಬದಲು ನಿವೃತ್ತಿ ಘೋಷಿಸಿ: ಸಿದ್ದರಾಮಯ್ಯಗೆ ಬಿಜೆಪಿ ಟಾಂಗ್