ಬಳ್ಳಾರಿ : ಹಗರಿಬೊಮ್ಮನಹಳ್ಳಿ ತಾಲೂಕಿನ ಮಾದೂರು ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ.
ಮಾದೂರು ಗ್ರಾಮದಲ್ಲಿ ಅಜ್ಜ ರಾಮಪ್ಪನೊಂದಿಗೆ ಹೊಲಕ್ಕೆ ತೆರಳಿದ್ದ ಬಾಲಕ ಅಜ್ಜಯ್ಯ (8) ಆಟವಾಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಬಾಲಕನ ತಂದೆ-ತಾಯಿ ಅಡವಿಮಲ್ಲನ ಕೇರಿ ಗ್ರಾಮದಲ್ಲಿ ವಾಸವಾಗಿದ್ದಾರೆ. ಮೃತ ಬಾಲಕ ಮಾದೂರು ಗ್ರಾಮದ ಅಜ್ಜನ ಮನೆಯಲ್ಲಿ ವಾಸವಾಗಿದ್ದ.
ಮೃತ ಬಾಲಕನ ದೇಹವನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.