ಬಳ್ಳಾರಿ: ನಗರದ ಮಿಲ್ಲರ್ ಪೇಟೆಯ ಗಡ್ಡೆಕೆಳಗಿನ ಯಲ್ಲಮ್ಮ ದೇವಸ್ಥಾನದ ಹತ್ತಿರದ ಸಮುದಾಯ ಭವನದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ತಡೆದು ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ.
ಯಲ್ಲಮ್ಮ ದೇವಸ್ಥಾನದ ಹತ್ತಿರ ಸಮುದಾಯ ಭವನದಲ್ಲಿ ಬಾಲ್ಯ ವಿವಾಹ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬ್ರೂಸ್ಪೇಟೆ ಪೊಲೀಸ್ ಠಾಣೆಯ ಎಎಸ್‍ಐ ಲೋಕರಾಜ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಬಾಲ್ಯ ವಿವಾಹವನ್ನು ತಡೆದು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ.
ಜೊತೆಗೆ ಯುವತಿಯನ್ನು ಮದುವೆಯಾಗುತ್ತಿದ್ದ ಸುರೇಂದ್ರ ಎಂಬ ವ್ಯಕ್ತಿ, ಬಾಲಕಿಯ ತಂದೆ-ತಾಯಿ, ಮದುವೆಗೆ ಸಹಕರಿಸಿದ ಪುರೋಹಿತ ಶೇಷಗಿರಿಸ್ವಾಮಿ ಸೇರಿದಂತೆ ಬಾಲ್ಯವಿವಾಹಕ್ಕೆ ಸಹಕರಿಸಿದವರೆಲ್ಲರ ಮೇಲೆ ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಬಾಲ್ಯ ವಿವಾಹ ಕಾಯ್ದೆಯಡಿ ರಿತ್ಯಾ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.