ವಿಜಯನಗರ: ಸಾರಿಗೆ ಬಸ್ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 11 ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ಬೆಂಗಳೂರಿನಿಂದ ಬರುತ್ತಿದ್ದ ಬಸ್, ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 11 ಜನರು ಗಾಯಗೊಂಡಿದ್ದಾರೆ. ಇವರಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ಹೈವೆ ಪೆಟ್ರೋಲಿಂಗ್ ಸಿಬ್ಬಂದಿ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಹಳೇಹುಬ್ಬಳ್ಳಿಯಲ್ಲಿ ಮತ್ತೆ ಹರಿದ ನೆತ್ತರು : ಕ್ಷುಲ್ಲಕ ಕಾರಣಕ್ಕೆ ಯುವಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ