ಬಳ್ಳಾರಿ: ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯದ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ರಾಜ್ಯ ಸರ್ಕಾರ ಹೊಸ ಯೋಜನೆ ರೂಪಿಸಿದೆ.
ಜಲಾಶಯದಲ್ಲಿ ಬಹಳಷ್ಟು ಹೂಳು ತುಂಬಿರುವ ಪರಿಣಾಮ ನೀರು ಸಂಗ್ರಹಣೆಯ ಸಾಮರ್ಥ್ಯ ಕಡಿಮೆಯಾಗಿತ್ತು. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪರ್ಯಾಯ ಜಲಾಶಯ ನಿರ್ಮಾಣ ಕುರಿತು ವಿಸ್ತೃತ ಯೋಜನಾ ವರದಿ ತಯಾರಿಸಲು ಸಚಿವ ಸಂಪುಟ ಅನುಮತಿ ನೀಡಿದೆ. ಪ್ರಸ್ತುತ ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯ 130 TMC ಇದೆ. ಹೂಳು ತುಂಬಿರುವ ಕಾರಣದಿಂದ ಕನಿಷ್ಠ 30 TMC ನೀರು ವ್ಯರ್ಥವಾಗುತ್ತಿತ್ತು.
ಈ ನೀರನ್ನು ಹಿಡಿದಿಟ್ಟು ಸಮರ್ಪಕವಾಗಿ ಬಳಕೆ ಮಾಡಲು ಮುಂದಾಗಿರುವ ಜಲಸಂಪನ್ಮೂಲ ಇಲಾಖೆ, ಹೊಸದಾಗಿ ಸಮತೋಲನ ಜಲಾಶಯ ನಿರ್ಮಾಣ ಮಾಡುವ ನೂತನ ಯೋಜನೆ ರೂಪಿಸಿದೆ. ಅದರಂತೆ ನವಲಿ ಗ್ರಾಮದ ಹತ್ತಿರ ಹೊಸದಾಗಿ ಸಮತೋಲನ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮಕ್ಕೆ ಕರ್ನಾಟಕ ರಾಜ್ಯದ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಸಮತೋಲನ ಜಲಾಶಯ ನಿರ್ಮಾಣಕ್ಕಾಗಿ ವಿಸ್ತೃತ ಯೋಜನಾ ವರದಿ ತಯಾರಿಸಲು 14.30 ಕೋಟಿ ರೂಪಾಯಿ ಮೊತ್ತದ ಅನುದಾನ ಬಿಡುಗಡೆ ಮಾಡಲು ಇಂದು ಜಲಸಂಪನ್ಮೂಲ ಇಲಾಖೆ ಆದೇಶಿಸಿದೆ.
ಬರದ ಸಮಸ್ಯೆ ನೀಗಿಸಲು ಮತ್ತು ನೀರಿನ ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಲು ಪರ್ಯಾಯ ಸಮತೋಲನ ಜಲಾಶಯದ ಅಗತ್ಯತೆಯನ್ನು ಮನಗಂಡು ಡಿಪಿಆರ್ ಸಮೀಕ್ಷೆ ಮಾಡಲು ಅಂದಾಜು ಮೊತ್ತದ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ ಸಿಎಂ ಯಡಿಯೂರಪ್ಪ ಅವರನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಭಿನಂದಿಸಿದ್ದಾರೆ.
ರೈತಪರ ಕಾಳಜಿಯುಳ್ಳ ಮುಖ್ಯಮಂತ್ರಿಯವರು ನೀರಾವರಿ ಯೋಜನೆಗಳ ಜಾರಿಗೆ ಕಟಿಬದ್ದರಾಗಿದ್ದಾರೆ. ಹೂಳು ತುಂಬಿದ ತುಂಗಭದ್ರಾ ಜಲಾಶಯದ ನೀರು ಸಂಗ್ರಹ ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸುವ ದಿಸೆಯಲ್ಲಿ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ಅನುಮತಿ ನೀಡಿದ್ದಾರೆ. ಸಮರ್ಪಕವಾಗಿ ಬೆಳೆ ಬೆಳೆಯಲು ರೈತರಿಗೆ ಅಗತ್ಯವಾದ ನೀರಾವರಿ ಯೋಜನೆಗಳ ಜಾರಿಗೆ
ರೈತರಿಗೆ ಸಮರ್ಪಕ ಸಹಕಾರ ಸಿಗಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಸಚಿವರು ಹೇಳಿದ್ದಾರೆ.
ನವಲಿ ಜಲಾಶಯ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ ತಯಾರಿಸಲು ಸಚಿವ ಸಂಪುಟ ಒಪ್ಪಿಗೆ - ನವಲಿ ಜಲಾಶಯ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ
ನವಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿ ತಯಾರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಸಮತೋಲನ ಜಲಾಶಯ ನಿರ್ಮಾಣಕ್ಕಾಗಿ ವಿಸ್ತೃತ ಯೋಜನಾ ವರದಿ ತಯಾರಿಸಲು 14.30 ಕೋಟಿ ರೂಪಾಯಿ ಮೊತ್ತದ ಅನುದಾನ ಬಿಡುಗಡೆ ಮಾಡಲು ಇಂದು ಜಲಸಂಪನ್ಮೂಲ ಇಲಾಖೆ ಆದೇಶಿಸಿದೆ.