ಬಳ್ಳಾರಿ: ಲಾಕ್ ಡೌನ್ ಆದೇಶ ಉಲ್ಲಂಘಿಸಿ ಅನಾವಶ್ಯಕವಾಗಿ ತಿರುಗಾಡುತ್ತಿದ್ದ 117 ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಅವರ ಮೇಲೆ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಎಸ್ಪಿ ಸಿ.ಕೆ.ಬಾಬಾ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಸಂತೆ, ಜಾತ್ರೆ ಹಾಗೂ ಜನರು ಗುಂಪು ಸೇರುವಿಕೆಯನ್ನು ಜಿಲ್ಲಾಧಿಕಾರಿಗಳು ನಿಷೇಧಿಸಿದ್ದರೂ ಸಹ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಗೊಲ್ಲರಹಳ್ಳಿಯಲ್ಲಿ ಹತ್ತರಿಂದ ಹದಿನೈದು ಜನ ಕೂಡಿಕೊಂಡು ಕಾಳಿಕಾದೇವಿ ರಥೋತ್ಸವ ಮಾಡಲಾಗಿದೆ.
ಜಿಲ್ಲಾ ದಂಡಾಧಿಕಾರಿಗಳ ಆದೇಶ ಉಲ್ಲಂಘಿಸಿದಕ್ಕೆ ಸೆಕ್ಷನ್ 188ರ ಅನ್ವಯ ಕ್ರಮಕೈಗೊಳ್ಳಲಾಗಿದೆ ಎಂದರು.
ಜಿಲ್ಲೆಯಲ್ಲಿ ಅಂತರಾಜ್ಯ ಮತ್ತು ಅಂತರ್ಜಿಲ್ಲಾ 27 ಚೆಕ್ಪೋಸ್ಟ್ಗಳು ಕಾರ್ಯನಿರ್ವಹಿಸುತ್ತಿದ್ದು, ಈ ಚೆಕ್ಪೋಸ್ಟ್ಗಳಲ್ಲಿ ಪೊಲೀಸ್, ಆರೋಗ್ಯ ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಪ್ರತಿನಿತ್ಯ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದ್ದಾರೆ ಎಂದರು.