ಬಳ್ಳಾರಿ: ನಗರಾಭಿವೃದ್ಧಿ ಪ್ರಾಧಿಕಾರದ ಆವರಣದಲ್ಲಿ ಅನಧಿಕೃತವಾಗಿ ಅಳವಡಿಸಿರುವ ಸಾರ್ವಜನಿಕ ಜಾಹೀರಾತು ಫಲಕಗಳನ್ನು ಬುಧವಾರ ತೆರವುಗೊಳಿಸಲಾಯಿತು.
ಸಾರ್ವಜನಿಕ ಜಾಹೀರಾತು ಫಲಕಗಳನ್ನು ತೆರವುಗೊಳಿಸುವ ಬಗ್ಗೆ ಮಹಾನಗರ ಪಾಲಿಕೆ ಆಯುಕ್ತರಾದ ತುಷಾರಮಣಿ ಅವರೊಂದಿಗೆ ಚರ್ಚಿಸಿ ಸರ್ವಾನುಮತದಿಂದ ಸಾರ್ವಜನಿಕ ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗಿದೆ ಎಂದು ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ತಿಳಿಸಿದ್ದಾರೆ.
ಈ ಸಂದರ್ಭ ಮಹಾನಗರ ಪಾಲಿಕೆಯ ಆಯುಕ್ತರಾದ ತುಷಾರಮಣಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಈರಪ್ಪ, ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಅಭಿಯಂತರಾದ ರವಿಶಂಕರ್, ನಗರಾಭಿವೃದ್ಧಿ ಪ್ರಾಧಿಕಾರದ ಹಾಗೂ ಮಹಾನಗರ ಪಾಲಿಕೆ ಸಿಬ್ಬಂದಿ ಹಾಜರಿದ್ದರು.