ಹೊಸಪೇಟೆ(ವಿಜಯನಗರ): ನಗರದ ತಾಲೂಕು ಕ್ರೀಡಾಂಗಣದಲ್ಲಿ ಅ.2 ಮತ್ತು 3 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಜಯನಗರ ಜಿಲ್ಲೆಗೆ ಕಾರ್ಯಕ್ರಮದ ಮೂಲಕ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗುವುದು ಎಂದು ಸಚಿವ ಆನಂದ್ ಸಿಂಗ್ ತಿಳಿಸಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿಂದು ಆನಂದ್ ಸಿಂಗ್ ಅವರು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಲ್ಯಾಣ ಕರ್ನಾಟಕಕ್ಕೆ ಸೇರಿರುವ ವಿಜಯನಗರ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಲಾಗಿದೆ. ಜಿಲ್ಲಾ ವಿಭಜನೆ ಬಳಿಕ 371 ಜೆ ಸೌಲಭ್ಯ ಸಿಗುವುದಿಲ್ಲ ಎಂಬ ಆತಂಕವಿತ್ತು. ಈಗ ಅದು ದೂರವಾಗಿದೆ ಎಂದು ಹೇಳಿದರು.
ಟಿಎಸ್ಪಿ ಕಟ್ಟಡವನ್ನು ಆರು ಕೋಟಿ ರೂ. ವೆಚ್ಚದಲ್ಲಿ ಡಿಸಿ ಕಚೇರಿಗಾಗಿ ನವೀಕರಣಗೊಳಿಸಲಾಗುತ್ತಿದೆ. ಅಲ್ಲದೇ, ಕಾರಿಗನೂರು ಇಎಸ್ಐ ಆಸ್ಪತ್ರೆ ನವೀಕರಣಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನು ಪ್ರಾರಂಭ ಮಾಡಲಾಗುವುದು ಎಂದರು.
ಇದನ್ನೂ ಓದಿ: ಕೊಪ್ಪಳ: ಕಲ್ಯಾಣ ಕರ್ನಾಟಕ ದಿನಾಚರಣೆ ನಿಮಿತ್ತ ಸಚಿವ ಹಾಲಪ್ಪ ಆಚಾರ್ ಧ್ವಜಾರೋಹಣ
ಹೊಸಪೇಟೆಯ ಮಹಾನಗರ ಪಾಲಿಕೆ ಮಾಡುವ ಕುರಿತು ಫೈನಲ್ ಆಗಿಲ್ಲ. ಜನರನ್ನು ವಿಶ್ವಾಸಕ್ಕೆ ತಗೆದುಕೊಂಡು ಕೆಲಸ ಮಾಡಲಾಗುವುದು. ಒಂದು ವೇಳೆ ಜನರು ಬೇಡ ಅಂದರೆ, ಕೈ ಬಿಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.