ಬಳ್ಳಾರಿ : ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅತಿವೃಷ್ಟಿ, ಪ್ರವಾಹ ಮತ್ತು ಕೋವಿಡ್ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸಲು ಕೈಗೊಂಡ ಕ್ರಮಗಳು, ಅತಿವೃಷ್ಟಿ ಮತ್ತು ಪ್ರವಾಹ, ಭೂ-ಕುಸಿತದಿಂದ ಉಂಟಾದ ಹಾನಿಯ ಕುರಿತು ಮುಖ್ಯಮಂತ್ರಿಗಳಿಗೆ ವಿವರಿಸಿದರು.
ಜಿಲ್ಲಾ ಪಂಚಾಯತ್ ಸಿಇಒ ಕೆ.ಆರ್.ನಂದಿನಿ, ಎಸ್ಪಿ ಸೈದುಲ್ಲಾ ಅಡಾವತ್, ಎಡಿಸಿ ಪಿ.ಎಸ್.ಮಂಜುನಾಥ, ಡಿಎಚ್ಒ ಡಾ. ಜನಾರ್ದನ, ವಿಮ್ಸ್ ನಿರ್ದೇಶಕ ಡಾ.ಬಿ.ದೇವಾನಂದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಇದ್ದರು.