ಬಳ್ಳಾರಿ: ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಮಳೆಯಿಂದಾದ ಬೆಳೆ ನಷ್ಟದ ಕುರಿತ ವೈಮಾನಿಕ ಸಮೀಕ್ಷೆ ಕಾರ್ಯವನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳ್ಳಾರಿಯಿಂದಲೇ ಆರಂಭಿಸಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ ಕೂಡ ಈ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಿದ್ದರು. ಜಿಂದಾಲ್ ಏರ್ಪೋರ್ಟ್ಗೆ ಬಂದಿಳಿದಿದ್ದ ಸಿಎಂ ಬಿಎಸ್ವೈ ಕಲಬುರಗಿಗೆ ತೆರಳುತ್ತಿರುವ ವೇಳೆ ವೈಮಾನಿಕ ಸಮೀಕ್ಷೆ ನಡೆಸಿದರು.