ಬಳ್ಳಾರಿ : ಬಡ, ಮಧ್ಯಮ ವರ್ಗದ ಮಹಿಳೆಯರು ಕೌಟುಂಬಿಕ ಸಮಸ್ಯೆಗಳಿಂದ ಮತ್ತು ದೌರ್ಜನ್ಯಗಳಿಂದ ಬಹಳ ನೋವನ್ನು ಅನುಭವಿಸುತ್ತಿದ್ದಾರೆ. ಅವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಹಾರ ನೀಡುವ ಕೆಲಸ ಆಗಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಯು ಬಸವರಾಜ್ ಒತ್ತಾಯಿಸಿದ್ದಾರೆ.
ನಗರದ ತಹಶೀಲ್ದಾರರ ಕಚೇರಿಯಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಯು ಬಸವರಾಜ್ ಪ್ರತಿಭಟನೆ ನಡೆಸಿ ಬಳಿಕ ಮಾತನಾಡಿದ ಅವರು, ಬಡ ಮಧ್ಯಮ ವರ್ಗದ ಮಹಿಳೆಯರು ಕೌಟುಂಬಿಕ ಸಮಸ್ಯೆಗಳಿಂದ ಮತ್ತು ದೌರ್ಜನ್ಯಗಳಿಂದ ಬಹಳ ನೋವನ್ನು ಅನುಭವಿಸುತ್ತಿದ್ದಾರೆ. ಅವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶೀಘ್ರವಾಗಿ ಪರಿಹಾರಗಳನ್ನು ನೀಡುವ ಕೆಲಸ ಆಗಬೇಕು ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಧ್ಯೆ ಪ್ರವೇಶ ಮಾಡುತ್ತಿಲ್ಲ. ಹಾಗೆ ಯಾವುದೇ ಸಂಘ, ಸಂಸ್ಥೆಗಳು ಸಹ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುತ್ತಿಲ್ಲ ಎಂದರು. ಈ ಪರಿಸ್ಥಿತಿಯಲ್ಲಿ ಈ ದೇಶದ ಶೇ. 56 ರಿಂದ 60ರಷ್ಟು ಮಹಿಳೆಯರ ಆರೋಗ್ಯ ಸರಿಯಾಗಿಲ್ಲ. ನಿಮೋನಿಯ, ರಕ್ತಹೀನತೆಯಂತಹ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದರು.
ಮಹಿಳೆಯ ಆರೋಗ್ಯ ಸುಧಾರಿಸುವ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದೆ ಬಂದು ಪರಿಹಾರಗಳನ್ನು ನೀಡಬೇಕು ಎಂದು ಒತ್ತಾಯಿಸಿದರು. ಈ ಸಮಯದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ಸತ್ಯಬಾಬು, ಚಂದ್ರ ಕುಮಾರಿ, ವೆಂಕಟೇಶ್, ಪ್ರಭಾವತಿ, ಅರುಣ್ ಇನ್ನಿತರರು ಹಾಜರಿದ್ದರು.