ಹೊಸಪೇಟೆ/ಬಳ್ಳಾರಿ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ತಿರುಕನ ಕನಸನ್ನು ಕಾಣುತ್ತಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ತುಳಿಯಲಿಕ್ಕೆ ನೋಡುತ್ತಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಅವರನ್ನು ದೂರವಿರಿಸಿದ್ದಾರೆ ಎಂದು ಶ್ರೀರಾಮುಲು ಆರೋಪಿಸಿದರು.
ನಗರದಲ್ಲಿ ಇಂದು ಸಂಜೆ ಬಹಿರಂಗ ಮತಯಾಚನೆಯ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವ ಶ್ರೀರಾಮುಲು ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಅಧಿಕಾರವನ್ನು ಕಳೆದುಕೊಂಡು ಹತಾಶರಾಗಿದ್ದಾರೆ. ಮಾಜಿ ಪ್ರಧಾನಮಂತ್ರಿ ದೇವೇಗೌಡರು ಒಂದು ಹೇಳಿಕೆಯನ್ನು ನೀಡುತ್ತಾರೆ, ಹೆಚ್ಡಿಕೆ ಒಂದು ಹೇಳಿಕೆಯನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ತಿರುಕನ ಕನಸನ್ನು ಕಾಣುತ್ತಿದ್ದಾರೆ ಎಂದು ಹರಿಹಾಯ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ಡಿವೋಸ್೯ ಕೊಟ್ಟ ಗಂಡ ಹೆಂಡತಿಯರ ಥರ ಆಗಿದ್ದಾರೆ. ಒಬ್ಬರ ಮುಖ ಒಬ್ಬರು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಲೇವಡಿ ಮಾಡಿದರು.