ಬಳ್ಳಾರಿ: ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದಡಿ ಬಳ್ಳಾರಿ ನಗರ ಶಾಸಕ ಸೋಮಶೇಖರರೆಡ್ಡಿ ಅವರ ಬಂದನಕ್ಕೆ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಎಂಎಲ್ಸಿಗಳಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ ಹಾಗೂ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ನೇತೃತ್ವದ ನೂರಾರು ಕಾರ್ಯಕರ್ತರು ತಂಡ ಡಿಸಿ ನಕುಲ್ ಅವರಿಗೆ ಸೋಮಶೇಖರ್ ರೆಡ್ಡಿ ಅವರನ್ನು ಬಂಧಿಸುವಂತೆ ಮನವಿ ಸಲ್ಲಿಸಿತು.