ಹೊಸಪೇಟೆ/ಬಳ್ಳಾರಿ: ಹೊಸಪೇಟೆಯಲ್ಲಿ ಈಶಾನ್ಯ ವಲಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರ ಕಚೇರಿಯಲ್ಲಿ ಮತಯಾಚನೆ ಮಾಡಿದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರ ಇದೇ ವೇಳೆ ಮಾತನಾಡಿದ ಅವರು, ಶಿಕ್ಷಕರ ಕ್ಷೇತ್ರಕ್ಕೆ ಎರಡನೇ ಬಾರಿಗೆ ಸ್ಪರ್ಧೆ ಮಾಡುತ್ತಿರುವೆ. ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಯಿತು. ಆ ಸಮಿತಿಯಲ್ಲಿ ನಾನು ಇದ್ದೆ. ಸಮಿತಿ ವರದಿಯನ್ನು ಜಾರಿಗೆ ತರಬೇಕು. ಅಲ್ಲದೇ, ಬಾಕಿ ಇರುವ ಶಿಕ್ಷಕರ ಸಂಬಳವನ್ನು ಕೂಡಲೇ ಬಿಡುಗಡೆ ಮಾಡಬೇಕು. ಜೊತೆಗೆ ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಭತ್ಯೆಯನ್ನು ನೀಡಬೇಕು ಎಂದ್ರು.ಕಾಂಗ್ರೆಸ್ ಬ್ಲಾಕ್ ಸಮಿತಿಯ ಅಧ್ಯಕ್ಷ ಹೆಚ್.ಎನ್. ಮೊಹಮ್ಮದ್ ಇಮಾಮ್ ನಿಯಾಜಿ, ಮುಖಂಡರಾದ ಗುಜ್ಜಲ ನಾಗರಾಜ್, ವಿ.ಸೋಮಪ್ಪ, ಗುಜ್ಜಲ ರಾಘವೇಂದ್ರ ಇನ್ನಿತರರಿದ್ದರು.